Featured

ಸುಶಾಂತ್ ಸಿಂಗ್ ಸಾವು ದುರದೃಷ್ಟಕರ , ಕೆಲವರು ಇದರಲ್ಲಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ : ಬಿಜೆಪಿಗೆ ಉದ್ಧವ್ ಠಾಕ್ರೆ -Vishwanews24

ಸುಶಾಂತ್ ಸಿಂಗ್ ರಜಪೂತ್ ಸಾವು ದುರದೃಷ್ಟಕರ , ಕೆಲವರು ಇದರಲ್ಲಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ : ಬಿಜೆಪಿಗೆ ಉದ್ಧವ್ ಠಾಕ್ರೆ -Vishwanews24

ಮುಂಬೈ,  : ”ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ದುರದೃಷ್ಟಕರ, ಆದರೆ ಕೆಲವರು ಈ ವಿಚಾರದಲ್ಲೇ ನೀಚ ರಾಜಕೀಯ ಮಾಡುತ್ತಿದ್ದಾರೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕ, ಶಿವಸೇನೆ ನಾಯಕ ಸಂಜಯ್ ರಾವತ್ ಅವರ ಸಂದರ್ಶನದಲ್ಲಿ ಮಾತನಾಡಿರುವ ಅವರು, ”ಯುವ ಪ್ರತಿಭಾವಂತ ನಟ ಸಾವನ್ನಪ್ಪಿರುವುದು ದುರದೃಷ್ಟಕರ. ಆದರೆ ಕೆಲವರು ಈ ವಿಚಾರದಲ್ಲೇ ಕೊಳಕು, ನೀಚ ರಾಜಕೀಯ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

”ಒಂದು ಜೀವ ಹೋಗಿದೆ. ಆದರೆ ನೀವು ಆ ವಿಚಾರದಲ್ಲೇ ಕೊಳಕು ರಾಜಕೀಯಕ್ಕೆ ಇಳಿದಿದ್ದೀರಿ. ಇದು ಸರಿಯೇ” ಎಂದು ವಿಪಕ್ಷ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಕಳೆದ ಜೂನ್ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಅಪಾರ್ಟ್ ಮೆಂಟ್‌ನಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಪತ್ತೆಯಾಗಿದ್ದು ಸುಶಾಂತ್‌ ಅಭಿಮಾನಿಗಳು ಹಾಗೂ ಕೆಲವು ನಟ, ನಟಿಯರು ಹಾಗೂ ಬಿಜೆಪಿಯು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದರು. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಇದೀಗ ಈ ಸಾವು ಪ್ರಕರಣವು ಹಲವು ತಿರುವುಗಳನ್ನು ಪಡೆದಿದ್ದು ಪ್ರಸ್ತುತ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯವು ಕೂಡಾ ಡ್ರಗ್‌, ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿಯೂ ತನಿಖೆ ನಡೆಸುತ್ತಿದೆ

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

44 minutes ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

54 minutes ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 hour ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 hour ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 hour ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 hour ago