ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಪ್ರಾಧಿಕಾರಕ್ಕೆ (ಎನ್‌ಐಎ) ಹಸ್ತಾಂತರಿಸಬೇಕೆ ಅಥವಾ ಬೇಡವೇ ಎಂಬುದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು, ಯಾವುದೇ ತನಿಖೆಗೆ ತಮ್ಮ ಆಕ್ಷೇಪವಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ವಿರೋಧ ಪಕ್ಷ ಬಿಜೆಪಿಯು ಪ್ರಕರಣವನ್ನು ಎನ್‌ಐಎ ತನಿಖೆಗೆ ಒತ್ತಾಯಿಸುತ್ತಿದೆ ಮತ್ತು ಸ್ಥಳೀಯ ಪೊಲೀಸರಿಂದ ನಡೆಯುತ್ತಿರುವ ತನಿಖೆಯ ಟೀಕೆಗಳ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಾದರ್, ಪ್ರಕರಣದ ಎಲ್ಲಾ ಅಪರಾಧಿಗಳನ್ನು ಮತ್ತು ಅಪರಾಧದ ನಂತರ ಹಲ್ಲೆಗಳಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ನಾನು ಈಗಾಗಲೇ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ ಎಂದು ಹೇಳಿದರು.
ಕೊಲೆ ನಡೆದಾಗ ಉದ್ವಿಗ್ನ ಪರಿಸ್ಥಿತಿ ಇತ್ತು. ಆ ಸಮಯದಲ್ಲಿ ನನ್ನ ಆದ್ಯತೆಯೆಂದರೆ ನನ್ನ ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವುದು. ಆದ್ದರಿಂದ, ನನಗೆ ಯಾವುದೇ ಮಾಹಿತಿ ಬಂದರೂ, ನಾನು ಅದನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಕೆಲವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಕಠಿಣ ಶಿಕ್ಷೆ ಆಗುವ ನಿಟ್ಟಿನಲ್ಲಿ ತನಿಖೆ ಮಾಡಲಿ. ರಾಜಕೀಯವಾಗಿ ಒಂದು ವಿಚಾರ ಸಿಕ್ಕರೆ ಸಾಕು ಮಾತನಾಡುತ್ತಾರೆ. ನನ್ನ ವಿರುದ್ಧ ಮಾತ ನಾಡುವವರ ವಿರುದ್ಧ ನಾನೇನೂ ಮಾತನಾಡಲ್ಲ. ದೇವರು ಹಾಗೂ ದೇವರಂತಹ ನನ್ನ ಕ್ಷೇತ್ರದ ಜನರು ಇರುವಾಗ ಇದ್ಯಾವುದರ ಬಗ್ಗೆಯೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…