ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮತ್ತೆ ಬಜಪೆಗೆ ಆಗಮಿಸಿದ್ದಾರೆ.
ಎನ್‌ಐಎ ಡಿವೈಎಸ್ಪಿ ರಾಜೀವ್ ಸಿಂಗ್, ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ್ ಸಹಿತ ಐವರು ಅಧಿಕಾರಿಗಳ ತಂಡ ಮಂಗಳವಾರ ಬಜಪೆ ಪೊಲೀಸ್ ಠಾಣೆಗೆ ಆಗಮಿಸಿದ್ದು, ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು ಎನ್ನುವ ಮಾಹಿತಿ ಆಧಾರದಲ್ಲಿ ಮೂವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದೆ.
ಕಳೆದ ಒಂದು ವರ್ಷದಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ. 2025ರ ಆ. 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ಬಜಪೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು.
2025ರ ಮೇ 1ರಂದು ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ ಸುಹಾಸ್ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಪಿಎಫ್‌ಐ ಕಾರ್ಯಕರ್ತರು ಸೇರಿ 12 ಮಂದಿಯನ್ನು ಬಂಧಿಸಲಾಗಿತ್ತು. ವಿದೇಶದಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆಗೆ ವಹಿಸಲಾಗಿತ್ತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…