ಸೂಪರ್ ಓವರ್‌ನಲ್ಲಿ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ -Vishwanews24

ಗೆಲ್ಲಲು 180 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 179 ರನ್ ಗಳಿಸಿದ ಪರಿಣಾಮ ಪಂದ್ಯ ಟೈ ಆಯ್ತು. ಹೀಗಾಗಿ ಪಂದ್ಯದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯ್ತು.

ಭಾರತದ ಪರ ಸೂಪರ್ ಓವರ್ ಆಡಲು ರೋಹಿತ್ ಶರ್ಮಾ ಮತ್ತು ರಾಹುಲ್ ಕ್ರೀಸ್‍ಗೆ ಆಗಮಿಸಿದರು. ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರಿನ ಮೊದಲ ಎಸೆತದಲ್ಲಿ ಎರಡು ರನ್ ಕದಿಯಲು ಹೋಗಿದ್ದ ವೇಳೆ ರೋಹಿತ್ ಶರ್ಮಾ ರನ್ ಔಟ್ ಆಗುವ ಸಾಧ್ಯತೆಯಿತ್ತು. ಕೀಪರ್ ಕೈ ಸೇರಿ ಬಾಲ್ ಕೆಳಗಡೆ ಬಿದ್ದ ಪರಿಣಾಮ ರೋಹಿತ್ ಶರ್ಮಾ ಪಾರಾದರು.

ಎರಡನೇ ಎಸೆತದಲ್ಲಿ ಒಂದು ರನ್ ಬಂದರೆ ಮೂರನೇ ಎಸೆತವನ್ನು ರಾಹುಲ್ ಬೌಂಡರಿಗೆ ಅಟ್ಟಿದರು. ಕೊನೆಯ ಮೂರು ಎಸೆತದಲ್ಲಿ 11 ರನ್ ಬೇಕಿದ್ದಾಗ ನಾಲ್ಕನೇಯ ಎಸೆತದಲ್ಲಿ ರಾಹುಲ್ 1 ರನ್ ಓಡಿದರು. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿತ್ತು. ಸಿಕ್ಸ್ ಹೊಡೆಯುವ ಅನಿವಾರ್ಯತೆ ಇದ್ದಾಗ ರೋಹಿತ್ ಶರ್ಮಾ 5ನೇ ಎಸೆತವನ್ನು ಬೌಂಡರಿ ಲೈನ್ ಆಚೆಗೆ ಬಾಲ್ ತಳ್ಳುವ ಮೂಲಕ ಪಂದ್ಯವನ್ನು ಜೀವಂತವಾಗಿಟ್ಟರು. ಕೊನೆಯ ಎಸೆತದಲ್ಲಿ 4 ರನ್ ಬೇಕಿತ್ತು. ಪಂದ್ಯ ಏನಾಗುತ್ತದೋ ಏನೋ ಎನ್ನುವ ಆತಂಕದಲ್ಲಿದ್ದಾಗ ರೋಹಿತ್ ಶರ್ಮಾ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಸ್ಮರಣೀಯ ಜಯವನ್ನು ತಂದುಕೊಟ್ಟರು. 65 ರನ್ ಜೊತೆಗೆ 15 ರನ್ ಹೊಡೆದ ರೋಹಿತ್ ಶರ್ಮಾಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago