ಹೈದರಾಬಾದ್ : ಸೂಪರ್ ಸ್ಟಾರ್ ರಜನಿಕಾಂತ್ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ‘ಇಂದು ಬೆಳಗ್ಗೆ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಹೈದರಾಬಾದ್ ನಲ್ಲಿ ಸಿನಿಮಾ ವೊಂದರ ಶೂಟಿಂಗ್ ನಲ್ಲಿದ್ದಾರೆ. ಸೆಟ್ ನಲ್ಲಿದ್ದ ಒಂದೆರಡು ಮಂದಿ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಡಿಸೆಂಬರ್ 22ರಂದು ಕೋವಿಡ್-19 ಗಾಗಿ ರಜನಿಕಾಂತ್ ಅವರನ್ನು ಪರೀಕ್ಷಿಸಲಾಗಿತ್ತು. ರಜನಿಕಾಂತ್ ಅವರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ತಿಳಿಸಿದೆ.
ಕರೋನಾ ನೆಗೆಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದರೂ, ಅಂದಿನಿಂದ ಅವರು ಪ್ರತ್ಯೇಕಗೊಂಡು, ಸೂಕ್ಷ್ಮವಾಗಿ ನಿಗಾ ವಹಿಸುತ್ತಿದ್ದಾರೆ. ಅವರಿಗೆ ಕೋವಿಡ್-19 ರ ಯಾವುದೇ ಲಕ್ಷಣಗಳು ಇರಲಿಲ್ಲವಾದರೂ, ಅವರ ರಕ್ತದೊತ್ತಡದಲ್ಲಿ ತೀವ್ರವಾದ ಏರಿಳಿತಗಳು ಕಂಡುಬಂದಿವೆ. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು, ಅದಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ.
ಡಿಸ್ಚಾರ್ಜ್ ಆಗುವ ಮುನ್ನ ಅವರ ರಕ್ತದೊತ್ತಡ ಕಡಿಮೆಯಾಗುವವರೆಗೂ ಅವರನ್ನು ಆಸ್ಪತ್ರೆಯಲ್ಲಿಯೇ ತಪಾಸಣೆ ಗೊಳಪಡಿಸಲಾಗುತ್ತದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡದಲ್ಲಿ ಏರುಪೇರು ಮತ್ತು ಆಯಾಸದ ಹೊರತಾಗಿ ಅವರಿಗೆ ಬೇರೆ ಯಾವುದೇ ರೋಗಲಕ್ಷಣಗಳಿರುವುದಿಲ್ಲ. ಹಿಮೋಡೈನಮಿಕ್ ಆಗಿ ಸ್ಥಿರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ..
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…