Featured

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು -Vishwanews24

ಅನಾರೋಗ್ಯದ ಕಾರಣ : ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು -Vishwanews24

ಹೈದರಾಬಾದ್ : ಸೂಪರ್ ಸ್ಟಾರ್ ರಜನಿಕಾಂತ್ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ‘ಇಂದು ಬೆಳಗ್ಗೆ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಹೈದರಾಬಾದ್ ನಲ್ಲಿ ಸಿನಿಮಾ ವೊಂದರ ಶೂಟಿಂಗ್ ನಲ್ಲಿದ್ದಾರೆ. ಸೆಟ್ ನಲ್ಲಿದ್ದ ಒಂದೆರಡು ಮಂದಿ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಡಿಸೆಂಬರ್ 22ರಂದು ಕೋವಿಡ್-19 ಗಾಗಿ ರಜನಿಕಾಂತ್ ಅವರನ್ನು ಪರೀಕ್ಷಿಸಲಾಗಿತ್ತು. ರಜನಿಕಾಂತ್ ಅವರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ತಿಳಿಸಿದೆ.

ಕರೋನಾ ನೆಗೆಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದರೂ, ಅಂದಿನಿಂದ ಅವರು ಪ್ರತ್ಯೇಕಗೊಂಡು, ಸೂಕ್ಷ್ಮವಾಗಿ ನಿಗಾ ವಹಿಸುತ್ತಿದ್ದಾರೆ. ಅವರಿಗೆ ಕೋವಿಡ್-19 ರ ಯಾವುದೇ ಲಕ್ಷಣಗಳು ಇರಲಿಲ್ಲವಾದರೂ, ಅವರ ರಕ್ತದೊತ್ತಡದಲ್ಲಿ ತೀವ್ರವಾದ ಏರಿಳಿತಗಳು ಕಂಡುಬಂದಿವೆ. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು, ಅದಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ.

ಡಿಸ್ಚಾರ್ಜ್ ಆಗುವ ಮುನ್ನ ಅವರ ರಕ್ತದೊತ್ತಡ ಕಡಿಮೆಯಾಗುವವರೆಗೂ ಅವರನ್ನು ಆಸ್ಪತ್ರೆಯಲ್ಲಿಯೇ ತಪಾಸಣೆ ಗೊಳಪಡಿಸಲಾಗುತ್ತದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡದಲ್ಲಿ ಏರುಪೇರು ಮತ್ತು ಆಯಾಸದ ಹೊರತಾಗಿ ಅವರಿಗೆ ಬೇರೆ ಯಾವುದೇ ರೋಗಲಕ್ಷಣಗಳಿರುವುದಿಲ್ಲ. ಹಿಮೋಡೈನಮಿಕ್ ಆಗಿ ಸ್ಥಿರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ..

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

30 minutes ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

5 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

5 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

5 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

6 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

6 hours ago