Featured

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ : HDK – VIshwanews24

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ : HDK

ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಅಭಿಯಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಬೆಂಬಲ ವ್ಯಕ್ತ ಪಡಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ.

ರಾಜ್ಯದಲ್ಲಿ ಇನ್ನೆಷ್ಟು ಅಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರ್ಕಾರ ಕಣ್ತೆರೆಯಲೇಬೇಕು. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರ್ಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಟ್ವೀಟ್ ಮಾಡಿ ಯಾವ ಜಿಲ್ಲೆಯಲ್ಲಿ ಆಸ್ಪತ್ರೆ ಇಲ್ಲವೋ ಕೂಡಲೇ ಅಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಎಚ್‍ಡಿಕೆ ಆಗ್ರಹಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

15 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago