ಸೂರಜ್ ರೇವಣ್ಣ ಪ್ರಕರಣ : ನಮಗೆ ಅಧಿಕೃತ ದೂರು ಬಂದಿಲ್ಲ , ಬಂದ ಕೂಡಲೇ ಕ್ರಮ : ಪರಮೇಶ್ವರ್‌ – vishwanews24

Featured, ರಾಜ್ಯ ನ್ಯೂಸ್

ಸೂರಜ್ ರೇವಣ್ಣ ಪ್ರಕರಣ : ನಮಗೆ ಅಧಿಕೃತ ದೂರು ಬಂದಿಲ್ಲ , ಬಂದ ಕೂಡಲೇ ಕ್ರಮ : ಪರಮೇಶ್ವರ್‌

ಬೆಂಗಳೂರು: ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸೂರಜ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತ ಹೇಳಿದ್ದಾರೆ. ನನಗೆ ಯಾವುದೇ ಪತ್ರ ಬಂದಿಲ್ಲ, ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯವರನ್ನು ‌ಕರೆದು ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಸೂರಜ್ ರೇವಣ್ಣ ಪ್ರಕರಣ : ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ : ಹೆಚ್‌ಡಿಕೆ ಗರಂ – vishwanews24

ಏನಿದು ಪ್ರಕರಣ?
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

 

Leave a Reply