ಬೆಂಗಳೂರು: ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತ ಹೇಳಿದ್ದಾರೆ. ನನಗೆ ಯಾವುದೇ ಪತ್ರ ಬಂದಿಲ್ಲ, ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯವರನ್ನು ಕರೆದು ಮಾತನಾಡುತ್ತೇವೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…