ಕಲಬುರಗಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ನಮೋ ಭಾರತ್ ಕಾರ್ಯಕ್ರಮ ನಿರ್ಬಂಧ ಹೇರಿದ್ದ ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ತೆರವುಗೊಳಿಸಿದೆ.
ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದ ಬಾಪುರಾವ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಮೋ ಭಾರತ್ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ನೀಡಿದ್ದ ಅನುಮತಿಯನ್ನು ರಾತ್ರೋರಾತ್ರಿ ಜಿಲ್ಲಾಡಳಿತ ರದ್ದು ಮಾಡಿ ಸೂಲಿಬೆಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.
ಸೂಲಿಬೆಲೆ ಜಿಲ್ಲೆ ಪ್ರವೇಶಿಸಿದರೆ ಶಾಂತಿ ಕದಡುತ್ತಾರೆ ಹಾಗೂ ಕಾನೂನು ವ್ಯವಸ್ಥೆ ಹಾಳಾಗಬಹುದು ಎಂಬ ನಿಟ್ಟಿನಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಫೆ.29 ರಿಂದ ಮಾರ್ಚ್ 4ರವರೆಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.
ಜಿಲ್ಲಾಡಳಿತದ ಆದೇಶವನ್ನ ಪ್ರಶ್ನಿಸಿ ನಮೋ ಬ್ರಿಗೇಡ್ ಮತ್ತು ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಶ್ರೀಶಾನಂದ ಅವರಿದ್ದ ಪೀಠ, ಈ ಹಿಂದೆ ಕಾರ್ಯಕ್ರಮ ನಡೆಸಲು ಪೊಲೀಸರು ನೀಡಿದ್ದ ಅನುಮತಿಯನ್ನು ನೀಡಬೇಕು. ಪೊಲೀಸರು ನೀಡಿದ್ದ ನಿಯಮಾವಳಿಗೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೇಳಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವು ಮಾಡಿತು.
ಕೋರ್ಟ್ ತೀರ್ಪು ಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸೂಲಿಬೆಲೆ, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಧೈರ್ಯವಾಗಿ ಪ್ರಶ್ನೆ ಮಾಡಿ ನಾವು ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದೇವೆ. ದೇಶ ಭಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ತಾಪುರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…