ಮಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಪಕ್ಷಾಂತರದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೊಸ ಸರ್ಕಾರ ರಚನೆಯಾದ ಬಳಿಕ ನೆರೆ ಬಂದಿದೆ. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಇದೊಂದು ನಿಷ್ಕ್ರಿಯ ಸರ್ಕಾರ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಈ ಹಿಂದೆ ಹುಲಿ ಎಂದಿದ್ದರು. ಇದೀಗ ಆನೆ ಎನ್ನುತ್ತಿದ್ದಾರೆ. ಈ ವಿಚಾರ ಅವರು ಒಪ್ಪಿಕೊಂಡಿದ್ದು, ನಾನೇನು ಮಾತನಾಡುವುದಿಲ್ಲ ಎಂಬುವುದಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ಕೇಂದ್ರ ಸರ್ಕಾರದ ವಿರುದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸೂಲಿಬೆಲೆಗೆ ಅವರ ಪರವಾಗಿ ನಿಂತು ಸಾಕಾಗಿ ಹೋಗಿದೆ. ಅವರು ಹೇಳಿದ ಒಂದು ಮಾತು ಕೂಡ ಅನುಷ್ಠಾನವಾಗಿಲ್ಲ. ಸೂಲಿಬೆಲೆ ಹೇಳಿದ್ದೆಲ್ಲವೂ ಸುಳ್ಳು ಎನ್ನುವುದು ಜನರ ಮನಸ್ಸಿಗೆ ಬಂದಿದೆ. ಅವರು ಹೇಳಿದ್ದು ಯಾವುದೂ ಕೈಗೂಡಲೇ ಇಲ್ಲ ವಾಸ್ತವಿಕವಾಗಿ ಅವರ ಮಾತುಗಳು ಸುಳ್ಳು ಅನ್ನೋದು ಜನರಿಗೆ ಅರ್ಥವಾಗಿದೆ. ಇದೀಗ ಅವರೇ ಕೇಂದ್ರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಮಾತುಗಳು ಅನುಷ್ಟಾನಕ್ಕೆ ಬರದ ಹಿನ್ನೆಲೆ ಈ ರೀತಿ ವರ್ತಿಸುತ್ತಿದ್ದಾರೆ ಎಂದು ರಮಾನಾಥ ರೈ ಪ್ರತಿಕ್ರಿಯೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…