ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು : ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಲು ಬಿಜೆಪಿ ವತಿಯಿಂದ ಸೆಪ್ಟೆಂಬರ್ 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯ ನಿರ್ಲಕ್ಷ್ಯ, ರೈತರ ಸಂಕಷ್ಟ, ಬಡವರಿಗೆ ಯೋಜನೆ ನೀಡದೇ ಇರುವುದು, ಉದ್ಯೋಗಾವಕಾಶ ಸೃಷ್ಟಿಯಲ್ಲಿ ವೈಫಲ್ಯ, ಮೀಸಲಾತಿ ಜಾರಿ, ಉತ್ತರ ಕರ್ನಾಟಕದ ಸಮಸ್ಯೆ, ಹೊಸ ನೇಮಕಾತಿ ಬಗ್ಗೆ ಸಿಎಂ ಆಸಕ್ತಿ ವಹಿಸುತ್ತಿಲ್ಲ. ಇವುಗಳ ಬಗ್ಗೆ ರಾಜ್ಯದ ಜನರಿಗೆ ತಿಳಿಸಿ ಸರ್ಕಾರದ ಬಂಡವಾಳ ಬಯಲು ಮಾಡಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24
ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರದಲ್ಲೇ ಮುಳುಗಿದೆ. ಇವರ ಬಣ್ಣವನ್ನು ಬೀದಿಗೆಳೆಯಲು ಬಿಜೆಪಿ ತೀರ್ಮಾನಿಸಿದೆ. ಸೆಪ್ಟೆಂಬರ್ 1 ರಂದು ರಾಯಚೂರಿನಿಂದ ಪಾದಯಾತ್ರೆ ಆರಂಭವಾಗಲಿದೆ. ಬಳ್ಳಾರಿಯಲ್ಲಿ ಸಮಾರೋಪ ನಡೆಯಲಿದೆ. ಸುಮಾರು 200 ಕಿ ಮೀ ಪಾದಯಾತ್ರೆ ಸಾಗಲಿದೆ. ಉದ್ಘಾಟನೆ ಮತ್ತು ಸಮಾರೋಪಕ್ಕೆ ಕೇಂದ್ರ ಸಚಿವರು ಆಗಮಿಸಲಿದ್ದಾರೆ ಎಂದರು.
ಬಡವರ, ರೈತರ,ಯುವಕರ ವಿರೋಧಿ ಸರ್ಕಾರದ ಬಣ್ಣ ಬಯಲು ಮಾಡಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಈ ಹತ್ತು ದಿನಗಳ ಕಾಲ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24
ಜೆಡಿಎಸ್‍ನಿಂದಲೂ ಬೆಂಬಲ
ಇದು ಬಿಜೆಪಿ ಪಾದಯಾತ್ರೆ. ಇದಕ್ಕೆ ಜೆಡಿಎಸ್ ಮುಖಂಡರಾದ ಎಚ್.ಡಿ.ಕುಮಾರಸ್ವಾಮಿ ಅವರೂ ಬೆಂಬಲ ನೀಡಲಿದ್ದಾರೆ ಎಂದು ತಿಳಿಸಿದರು.
