ಉಡುಪಿ: ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಮತ್ತು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸಹಕಾರದೊಂದಿಗೆ “ಬೃಹತ್ ಉದ್ಯೋಗ ಮೇಳ”ವನ್ನು ಸೆ.13ರಂದು ಬೆಳಿಗ್ಗೆ 8.30ರಿಂದ ಸಂಜೆ 5 ರವರೆಗೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ಯಶ್ಪಾಲ್ ಸುವರ್ಣ ಅವರು, ಈಗಾಗಲೇ 100ಕ್ಕೂ ಅಧಿಕ ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ. 75 ಕೌಂಟರ್ ಗಳು ಇರಲಿದ್ದು, ಆನ್ ಲ್ಯೆನ್ ಮೂಲಕವೂ ನೋಂದಣಿ ಮಾಡಬಹುದು. ಬೆಳಿಗ್ಗೆ, ಸಂಜೆ ಉಪಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರದ ಅಧ್ಯಕ್ಷ ಜ್ಞಾನೇಶ್ವರ ಕೋಟ್ಯಾನ್ ಇದ್ದರು.
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…
ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…
ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ, ದ್ವಿಚಕ್ರ ವಾಹನ ವಶಕ್ಕೆ ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ…
ಮಂಗಳೂರು : ಬೋಲಾಸ್ ಘಟಕಕ್ಕೆ ಆರೋಗ್ಯ ಇಲಾಖೆ ದಾಳಿ ; 1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ ಮಂಗಳೂರು…
ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಕಾಮಗಾರಿ ಹಿನ್ನಲೆ - ಪ್ರಮುಖ ರೈಲುಗಳ ಸಮಯ ಬದಲಾವಣೆ ಬೆಂಗಳೂರು:ರೈಲ್ವೆ ಕಾಮಗಾರಿ ಹಿನ್ನೆಲೆ ನೈರುತ್ಯ…