Featured

ಸೆ.20ರಿಂದ 108 ಅಂಬುಲೆನ್ಸ್‌ ಸೇವೆ ಬಂದ್‌ : ನೌಕರರಿಂದ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ – vishwanews24

ಸೆ.20 ರಿಂದ 108 ಸೇವೆ ಬಂದ್ ;  ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್..

3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಅಂಬುಲೆನ್ಸ್‌ ನೌಕರರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು, ಸೆಪ್ಟೆಂಬರ್ 20 ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟಕ್ಕಿಳಿಯುವುದಾಗಿ ಸಂಘಟನೆಗಳು ತಿಳಿಸಿವೆ.

ಇದನ್ನೂ ಓದಿ: 

ಈ ಕುರಿತು ‘ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ’ ಹಾಗೂ ‘ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್ ನೌಕರರ ಸಂಘ’ದ ಪದಾಧಿಕಾರಿಗಳು ಆರೋಗ್ಯ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜಿವಿಕೆ ಸಂಸ್ಥೆಯ ಅಧೀನದಲ್ಲಿ ಸುಮಾರು 35,000 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನೌಕರರ ಬೇಡಿಕೆಗಳೇನು?
– ನೇಮಕಾತಿ ವೇಳೆ ಭರವಸೆ ನೀಡಿದಂತೆ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡಬೇಕು. 2017 ರಿಂದ 2022ರ ವರೆಗೆ ಯಾವುದೇ ವೇತನ ಹೆಚ್ಚಳವಾಗಿಲ್ಲ.

⚫  3 ಪಾಳಿಗಳಲ್ಲಿ ಆಂಬುಲೆನ್ಸ್ ವಾಹನದ ಸೌಕರ್ಯ ಒದಗಿಸಬೇಕು.

⚫ ವಲಯವಾರು ವಿಂಗಡಣೆ ಮಾಡಿ ನಿಗದಿಪಡಿಸಿರುವ ವೇತನವನ್ನು ರದ್ದುಪಡಿಸಿ, ಎಲ್ಲರಿಗೂ ಏಕರೂಪ ವೇತನ ಜಾರಿಗೊಳಿಸಬೇಕು ಹಾಗೂ ಜ್ಯೇಷ್ಠತೆ  ಆಧಾರದ ಮೇಲೆ ವೇತನ ನಿಗದಿ ಮಾಡಬೇಕು.

⚫ ಕಾರ್ಮಿಕ ಇಲಾಖೆಯ ನಿಯಮಾವಳಿಯಂತೆ ಪ್ರತಿ ತಿಂಗಳ 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು.

⚫ ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು.

⚫ ಎಲ್ಲಾ ಕೆಲಸದ ಸ್ಥಳಗಳಲ್ಲಿ ಶೌಚಾಲಯ, ವಿಶ್ರಾಂತಿ ಕೊಠಡಿ ಹಾಗೂ ಅಂಬುಲೆನ್ಸ್ ಸ್ವಚ್ಛಗೊಳಿಸಲು ನೀರಿನ ವ್ಯವಸ್ಥೆ ಕಲ್ಪಿಸಬೇಕು.

ಕಠಿಣ ಕ್ರಮ:
ಮುಷ್ಕರದಿಂದಾಗಿ ರೋಗಿಗಳಿಗೆ ಯಾವುದೇ ತೊಂದರೆಯಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯುಟಿ ಖಾದರ್‌ ಎಚ್ಚರಿಸಿದ್ದಾರೆ. ಚಾಲಕರಿಗೆ ಸಮಸ್ಯೆಗಳಿದ್ದರೆ ಸಂಬಂಧಪಟ್ಟ ಸೇವಾ ಸಂಸ್ಥೆಯೊಂದಿಗೆ ಮಾತುಕತೆ ನಡೆಸಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ…

14 minutes ago

ಗ್ರಾಮೀಣ ಪ್ರದೇಶಗಳಲ್ಲಿ ಇನ್ಮುಂದೆ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ – vishwanews24

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ ನವದೆಹಲಿ:  ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ…

26 minutes ago

ಸುಳ್ಯ: ಮರ ಕತ್ತರಿಸುವ ವೇಳೆ ಹೃದಯಘಾತ ; ವ್ಯಕ್ತಿ ಸಾವು – vishwanews24

ಸುಳ್ಯ: ಮರ ಕತ್ತರಿಸುವ ವೇಳೆ ಹೃದಯಘಾತ ; ವ್ಯಕ್ತಿ ಸಾವು ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ…

30 minutes ago

ಕಾಪು : ಬಿಜೆಪಿ ನೂತನ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ನೇಮಕ – vishwanews24

ಕಾಪು : ಬಿಜೆಪಿ ನೂತನ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ನೇಮಕ ಭಾರತೀಯ ಜನತಾ ಪಾರ್ಟಿ…

2 hours ago

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ – VISHWANEWS24

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ ಮೂಲ್ಕಿ : ಒಂಬತ್ತು…

17 hours ago

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ – vishwanews24

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ   ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ…

17 hours ago