ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ.
ಸ್ಪರ್ಧೆಗಳ ವಿವಿರ:
ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.
ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.
ಭಾಗವಹಿಸುವ ಸ್ಪರ್ಧಿಗಳು ಸ್ಪರ್ಧೆ ನಡೆಯುವ ದಿನದಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಸರು ಹಾಗೂ ತಂಡವನ್ನು ನೋಂದಾಯಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ, ರಾಜೀವ್ ಗಾಂಧಿ ಕ್ರೀಡಾಂಗಣ ಹೆಜಮಾಡಿ ಕಾಪು ಮೊ.ನಂ: 9448770165 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…