ಬೆಂಗಳೂರು: ಸೆಪ್ಟೆಂಬರ್ 7ರಂದು ಚಂದ್ರನಂಗಳದಲ್ಲಿ ಚಂದ್ರಯಾನ-2 ಲ್ಯಾಂಡ್ ಆಗಲಿದೆ. ಈ ಕುತೂಹಲದ ಕ್ಷಣವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಇಸ್ರೋ ಕೇಂದ್ರ ಸಂಸ್ಥೆಯಲ್ಲಿ ಕಾರ್ಯಕ್ರಮದ ವ್ಯವಸ್ಥೆ ಮಾಡಲಾಗಿದೆ.
ಈಗಾಗಲೇ ಪ್ರಧಾನಿ ಕಾರ್ಯಾಲಯ ಮೋದಿಯವರ ಕಾರ್ಯಕ್ರಮಗಳ ವೇಳಾಪಟ್ಟಿ ಸಿದ್ಧಪಡಿಸಿದ್ದು, ಶುಕ್ರವಾರ ರಾತ್ರಿ 9.30ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಮೋದಿ ಆಗಮಿಸಲಿದ್ದಾರೆ. ನಂತರ ರಾತ್ರಿ 10ಗಂಟೆಗೆ ಇಸ್ರೋದ ಅತಿಥಿ ಗೃಹಕ್ಕೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸೆಪ್ಟೆಂಬರ್ 7ರ ಬೆಳಗ್ಗಿನ ಜಾವ 1.15ಕ್ಕೆ ಇಸ್ರೋಗೆ ತೆರಳಿ, 1.30 ರಿಂದ ಬೆಳಗ್ಗೆ 7 ಗಂಟೆಯವರೆಗೂ ಇಸ್ರೋದಲ್ಲಿ ಪ್ರಧಾನಿ ಇರಲಿದ್ದಾರೆ.
ಸೆಪ್ಟೆಂಬರ್ 7 ರಂದು ಬೆಳಗ್ಗೆ 1 ಗಂಟೆ 55 ನಿಮಿಷಕ್ಕೆ ಚಂದ್ರಯಾನ-2ನ ‘ಪ್ರಗ್ಯಾನ್’ ರೋವರ್ ಮತ್ತು ‘ವಿಕ್ರಮ್’ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿವೆ. ಇದರ ನೇರ ಪ್ರಸಾರವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಣೆ ಮಾಡಲಿದ್ದಾರೆ.
ಸೆಪ್ಟೆಂಬರ್ 6 ರಂದು ರಾತ್ರಿ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…