Featured

ಸೇತುವೆಯಿಂದ ಚರಂಡಿಗೆ ಬಿದ್ದ ಬಸ್​ ; 29 ಸಾವು, 17 ಮಂದಿಗೆ ಗಾಯ -Vishwanews24

ಲಖನೌ, : ಇಲ್ಲಿನ ಯುಮುನಾ ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್​​ ಸ್ಕಿಡ್​​ ಆದ ಪರಿಣಾಮ ರಸ್ತೆ ನಡುವಿನ ಸೇತುವೆಯಿಂದ ಬಹುದೊಡ್ಡ ಚರಂಡಿಗೆ ಬಿದ್ದು ಸುಮಾರು 29 ಮಂದಿ ಸಾವಿಗೀಡಾಗಿ, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರಂತ ನಡೆದಿದೆ.

165 ಕಿ.ಮೀ. ಇರುವ ಯಮುನಾ ಎಕ್ಸ್​ಪ್ರೆಸ್‌ ವೇ ಗ್ರೇಟರ್​ ನೋಯ್ಡಾದಿಂದ ಉತ್ತರ ಪ್ರದೇಶದ ಆಗ್ರಾವನ್ನು ಸಂಪರ್ಕಿಸುತ್ತದೆ. ಸುಮಾರು 46 ಪ್ರಯಾಣಿಕರನ್ನು ಹೊತ್ತು ಉತ್ತರ ಪ್ರದೇಶದ ರಾಜಧಾನಿ ಲಖನೌದಿಂದ ದೆಹಲಿಗೆ ತೆರಳುತ್ತಿದ್ದ ಬಸ್​ ರಸ್ತೆಯ ನಡುವೆ ಸ್ಕಿಡ್​ ಆಗಿ ಸೇತುವೆಯಿಂದ ಸುಮಾರು 40 ಅಡಿ ಆಳವಿರುವ ಚರಂಡಿಗೆ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯುಪಿ ಪೊಲೀಸರು ಈ ಕುರಿತು ಮಾಹಿತಿ ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ ಒನ್​ ಸ್ಲೀಪರ್​ ಕೋಚ್​ ಬಸ್​ ಆಗಿದ್ದು, ದುರಂತ ಸಂಭವಿಸುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್​ ಚರಂಡಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಆಗ್ರಾ ಸಮೀಪದಲ್ಲೇ ಈ ದುರ್ಘಟನೆ ಸಂಭವಿಸಿದೆ.

ಚರಂಡಿಗೆ ಬಿದ್ದಿರುವುದರಿಂದ ಬಸ್​ನ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬಸ್​​ನ ಮೇಲ್ಭಾಗದ ಕಬ್ಬಿಣದ ಬಿಡಿ ಭಾಗಗಳನ್ನು ಸರಿಸಿ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಚರಂಡಿಯಾಗಿರುವುದರಿಂದ ರಕ್ಷಣ ಕಾರ್ಯಾಚರಣೆಗೆ ತೊಡಕಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಹಾಗೂ ಸಾವಿಗೀಡಾದ ಕುಟುಂಬದವರಿಗೆ ಸಹಾಯಾಸ್ತ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago