ಲಖನೌ, : ಇಲ್ಲಿನ ಯುಮುನಾ ಎಕ್ಸ್ಪ್ರೆಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಸ್ಕಿಡ್ ಆದ ಪರಿಣಾಮ ರಸ್ತೆ ನಡುವಿನ ಸೇತುವೆಯಿಂದ ಬಹುದೊಡ್ಡ ಚರಂಡಿಗೆ ಬಿದ್ದು ಸುಮಾರು 29 ಮಂದಿ ಸಾವಿಗೀಡಾಗಿ, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರಂತ ನಡೆದಿದೆ.
165 ಕಿ.ಮೀ. ಇರುವ ಯಮುನಾ ಎಕ್ಸ್ಪ್ರೆಸ್ ವೇ ಗ್ರೇಟರ್ ನೋಯ್ಡಾದಿಂದ ಉತ್ತರ ಪ್ರದೇಶದ ಆಗ್ರಾವನ್ನು ಸಂಪರ್ಕಿಸುತ್ತದೆ. ಸುಮಾರು 46 ಪ್ರಯಾಣಿಕರನ್ನು ಹೊತ್ತು ಉತ್ತರ ಪ್ರದೇಶದ ರಾಜಧಾನಿ ಲಖನೌದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ರಸ್ತೆಯ ನಡುವೆ ಸ್ಕಿಡ್ ಆಗಿ ಸೇತುವೆಯಿಂದ ಸುಮಾರು 40 ಅಡಿ ಆಳವಿರುವ ಚರಂಡಿಗೆ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯುಪಿ ಪೊಲೀಸರು ಈ ಕುರಿತು ಮಾಹಿತಿ ಖಚಿತಪಡಿಸಿದ್ದಾರೆ.
ಮೂಲಗಳ ಪ್ರಕಾರ ಒನ್ ಸ್ಲೀಪರ್ ಕೋಚ್ ಬಸ್ ಆಗಿದ್ದು, ದುರಂತ ಸಂಭವಿಸುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್ ಚರಂಡಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಆಗ್ರಾ ಸಮೀಪದಲ್ಲೇ ಈ ದುರ್ಘಟನೆ ಸಂಭವಿಸಿದೆ.
ಚರಂಡಿಗೆ ಬಿದ್ದಿರುವುದರಿಂದ ಬಸ್ನ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬಸ್ನ ಮೇಲ್ಭಾಗದ ಕಬ್ಬಿಣದ ಬಿಡಿ ಭಾಗಗಳನ್ನು ಸರಿಸಿ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಚರಂಡಿಯಾಗಿರುವುದರಿಂದ ರಕ್ಷಣ ಕಾರ್ಯಾಚರಣೆಗೆ ತೊಡಕಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಹಾಗೂ ಸಾವಿಗೀಡಾದ ಕುಟುಂಬದವರಿಗೆ ಸಹಾಯಾಸ್ತ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…