Featured

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ

ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ ವಸಿಷ್ಠ ಸೇತುವೆಯ ಬಳಿ ಸಂಭವಿಸಿದ ದುರಂತವೊಂದು ಸಂಭವಿಸಿದೆ. ಮೂರು ವರ್ಷದ ಮಗುವನ್ನು ಬಿಟ್ಟು ದಂಪತಿ ಬ್ರಿಡ್ಜ್ ಮೇಲಿಂದ ನದಿಗೆ ಹಾರಿದ್ದು, ಕಂದಮ್ಮ ಅನಾಥವಾಗಿದೆ.

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಪುರು ಗ್ರಾಮದ ನಿವಾಸಿಗಳಾದ ಪತಿ ದೊಡ್ಡ ಸಾಯಿ (29) ಮತ್ತು ಅವರ ಪತ್ನಿ ಶಿರೀಷಾ (28) ನದಿಗೆ ಹಾರಿದ ದಂಪತಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: 

ಪೊಲೀಸರ ಮಾಹಿತಿ ಪ್ರಕಾರ, ಘಟನೆ ನಡೆದ ರಾತ್ರಿ 10 ಗಂಟೆ ಸುಮಾರಿಗೆ ದಂಪತಿಯು ಮಗುವಿನೊಂದಿಗೆ ಸ್ಕೂಟರ್‌ನಲ್ಲಿ ಸೇತುವೆ ಬಳಿ ಬಂದಿದ್ದರು. ಬಳಿಕ ಮಗುವನ್ನು ಸ್ಕೂಟರ್ ಮೇಲೆಯೇ ಬಿಟ್ಟು ಉಕ್ಕಿ ಹರಿಯುತ್ತಿದ್ದ ಗೋದಾವರಿ ನದಿಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ. ಕತ್ತಲು ಹಾಗೂ ಚಳಿ ಮಧ್ಯೆ ಮಗು ಒಂಟಿಯಾಗಿ ಸೇತುವೆ ಮೇಲೆ ಅಳುತ್ತಿರುವುದನ್ನು ಗಮನಿಸಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಗು ಅಮ್ಮ… ಅಪ್ಪ ಎಂದು ಕರೆಯುತ್ತಿರುವುದನ್ನು ಕೇಳಿ ಸ್ಥಳೀಯರು ಪೋಷಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮಗುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಸ್ಕೂಟರ್ ಅನ್ನು ಜಪ್ತಿ ಮಾಡಿದ್ದಾರೆ. ಬಳಿಕ ಮಗುವನ್ನು ಕುಟುಂಬದ ಸದಸ್ಯರಿಗೆ ಒಪ್ಪಿಸಲಾಗಿದೆ. ಸದ್ಯ ದಂಪತಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದ್ದು, ಪೊಲೀಸ್ ಸಿಬ್ಬಂದಿ, ಈಜುಗಾರರು ಮತ್ತು ದೋಣಿ ತಂಡಗಳು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: 

ಪ್ರಾಥಮಿಕ ತನಿಖೆಯಲ್ಲಿ, ತಂದೆಯು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಆಂಧ್ರಪ್ರದೇಶಕ್ಕೆ ಹಿಂತಿರುಗುವ ಮೊದಲು ಗಲ್ಫ್‌ನಲ್ಲಿದ್ದರು. ಸಾಲದ ಹೊರೆ ಹಾಗೂ ಹಣಕಾಸಿನ ಒತ್ತಡದಿಂದ ಅವರು ಬಳಲುತ್ತಿದ್ದರು. ಅಲ್ಲದೇ ಆರ್ಥಿಕ ಸಮಸ್ಯೆಯ ಕಾರಣದಿಂದಲೇ ದಂಪತಿ ತಮ್ಮ ಮನೆಯನ್ನು ಮಾರಾಟ ಮಾಡಲು ನಿರ್ಧರಿಸಿದ್ದರು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಸದ್ಯ ಘಟನೆಗೆ ನಿಖರವಾದ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

1 hour ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

1 hour ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 hours ago

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ – vishwanews24

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…

2 hours ago