ನವದೆಹಲಿ,: ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ (ಸಿಡಿಎಸ್) ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುನ್ನತ ಹುದ್ದೆಯ ಜವಾಬ್ದಾರಿ ನನಗೆ ದೊರಕಿರುವುದಕ್ಕೆ ಹೆಮ್ಮೆಯಾಗುತ್ತಿದೆ. ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವಾಲುಗಳನ್ನು ನಿಭಾಯಿಸುವ ಮೂಲಕ ದೇಶಕ್ಕೆ ಹೆಮ್ಮೆ ತರುವ ಕೆಲಸ ಮಾಡುತ್ತೇನೆ ಎಂದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ವಿ.ಆರ್. ಚೌಧರಿ, ನೌಕಾಪಡೆಯ ಉಪ ಅಡ್ಮಿರಲ್ ಎಸ್.ಎನ್. ಘೋರ್ಮಾಡೆ, ಏರ್ ಮಾರ್ಷಲ್ ಬಿ.ಆರ್. ಕೃಷ್ಣ ಉಪಸ್ಥಿತರಿದ್ದರು.
ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಒಂಬತ್ತು ತಿಂಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದರು. ಬಳಿಕ ತೆರವಾಗಿದ್ದ ಹುದ್ದೆಗೆ ಇದೀಗ ಅನಿಲ್ ಚೌಹಾಣ್ ನೇಮಕಗೊಂಡಿದ್ದಾರೆ.
61 ವರ್ಷದ ಚೌಹಾಣ್ ಅವರು ಅನುಭವಿ ಅಧಿಕಾರಿಯಾಗಿದ್ದು, ಮಿಲಿಟರಿ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪೂರ್ವ ಸೇನಾ ಕಮಾಂಡರ್ ಆಗಿದ್ದ ಅವರು ಕಳೆದ ವರ್ಷ ಮೇ 31ರಂದು ಸೇವಾ ನಿವೃತ್ತಿಗೊಂಡಿದ್ದರು. ನಿವೃತ್ತಿಯ ಬಳಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದ ರಾಷ್ಟ್ರೀಯ ಭದ್ರತಾ ಸಮಿತಿಯ ಮಿಲಿಟರಿ ಸಲಹೆಗಾರರಾಗಿ ಕರ್ತವ್ಯ ನಿಭಾಯಿಸಿದ್ದರು.
ಇದನ್ನೂ ಓದಿ: ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ : ಶೋಭಾ ಕರಂದ್ಲಾಜೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…