Featured

ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಜನರಲ್ ಅನಿಲ್ ಚೌಹಾಣ್  – Vishwanews24

ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಜನರಲ್ ಅನಿಲ್ ಚೌಹಾಣ್

ನವದೆಹಲಿ,: ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ (ಸಿಡಿಎಸ್‌) ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುನ್ನತ ಹುದ್ದೆಯ ಜವಾಬ್ದಾರಿ ನನಗೆ ದೊರಕಿರುವುದಕ್ಕೆ ಹೆಮ್ಮೆಯಾಗುತ್ತಿದೆ. ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವಾಲುಗಳನ್ನು ನಿಭಾಯಿಸುವ ಮೂಲಕ ದೇಶಕ್ಕೆ ಹೆಮ್ಮೆ ತರುವ ಕೆಲಸ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ, ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ವಿ.ಆರ್. ಚೌಧರಿ, ನೌಕಾಪಡೆಯ ಉಪ ಅಡ್ಮಿರಲ್ ಎಸ್.ಎನ್. ಘೋರ್ಮಾಡೆ, ಏರ್ ಮಾರ್ಷಲ್ ಬಿ.ಆರ್. ಕೃಷ್ಣ ಉಪಸ್ಥಿತರಿದ್ದರು.

ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಒಂಬತ್ತು ತಿಂಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದರು. ಬಳಿಕ ತೆರವಾಗಿದ್ದ ಹುದ್ದೆಗೆ ಇದೀಗ ಅನಿಲ್ ಚೌಹಾಣ್ ನೇಮಕಗೊಂಡಿದ್ದಾರೆ.

61 ವರ್ಷದ ಚೌಹಾಣ್ ಅವರು ಅನುಭವಿ ಅಧಿಕಾರಿಯಾಗಿದ್ದು, ಮಿಲಿಟರಿ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪೂರ್ವ ಸೇನಾ ಕಮಾಂಡರ್ ಆಗಿದ್ದ ಅವರು ಕಳೆದ ವರ್ಷ ಮೇ 31ರಂದು ಸೇವಾ ನಿವೃತ್ತಿಗೊಂಡಿದ್ದರು. ನಿವೃತ್ತಿಯ ಬಳಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದ ರಾಷ್ಟ್ರೀಯ ಭದ್ರತಾ ಸಮಿತಿಯ ಮಿಲಿಟರಿ ಸಲಹೆಗಾರರಾಗಿ ಕರ್ತವ್ಯ ನಿಭಾಯಿಸಿದ್ದರು.

ಇದನ್ನೂ ಓದಿ: ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ : ಶೋಭಾ ಕರಂದ್ಲಾಜೆ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago