Featured

ಸೇನಾ ತರಬೇತಿ ಪಡೆಯಲು ಧೋನಿಗೆ ಅನುಮತಿ ​ನೀಡಿದ ಸೇನಾಪಡೆ ಮುಖ್ಯಸ್ಥ ಬಿಪಿನ್​ ರಾವತ್ -Vishwanews24

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಗೌರವ ಲೆಫ್ಟಿನೆಂಟ್​ ಕರ್ನಲ್​ ಮಹೇಂದ್ರ ಸಿಂಗ್​ ಧೋನಿ ಅವರಿಗೆ ಭಾರತೀಯ ಸೇನಾಪಡೆಯಲ್ಲಿ ಸೇನಾ ತರಬೇತಿ ಪಡೆಯಲು ಸೇನಾಪಡೆ ಮುಖ್ಯಸ್ಥ ಬಿಪಿನ್​ ರಾವತ್​ ಅನುಮತಿ ನೀಡಿದ್ದಾರೆ. ಪ್ಯಾರಾಚೂಟ್​ ರೆಜಿಮೆಂಟ್​ ಬೆಟಾಲಿಯನ್​ನಲ್ಲಿ ಧೋನಿ ತರಬೇತಿ ಪಡೆಯಲಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಕಾಶ್ಮೀರದಲ್ಲಿ ಸೇನಾ ತರಬೇತಿಗೆ ಹೋಗುತ್ತಿದ್ದಾರೆ. ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವ್ಯ ನಿರ್ವಹಿಸಲು ಇಚ್ಛಿಸಿದ್ದರು. ಅದರಂತೆಯೇ ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಅನ್ನು ಸೇರಿಕೊಂಡು ತರಬೇತಿಯಲ್ಲಿ ಭಾಗವಹಿಸಲು ಅನುಮತಿ ಕೇಳಿದ್ದರು. ಇದೀಗ ಧೋನಿ ಅವರ ಮನವಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪುರಸ್ಕರಿಸಿ ಆರ್ಮಿ ಬೆಟಾಲಿಯನ್ ತರಬೇತಿ ಪಡೆಯಲು ಧೋನಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಈಗಾಗಲೇ ಮುಖ್ಯಸ್ಥರು ಅವರ ಮನವಿಯನ್ನುಅಂಗೀಕರಿಸಿದ್ದಾರೆ. ಆದರೆ ಅವರಿಗೆ ಕೇವಲ ತರಬೇತಿ ಪಡೆಯಲು ಮಾತ್ರ ಅವಕಾಶವಿದೆ. ಬೇರೆ ಯಾವುದೇ ಮಿಲಿಟರಿ ಕಾರ್ಯಚಣೆಯಲ್ಲಿ ಭಾಗವಹಿಸುವ ಅವಕಾಶವಿಲ್ಲ ಎಂದು ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago