ಇಂದು ತಮಿಳುನಾಡಿನ ಕುನೂರ್ ಬಳಿ Mi-17V5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿ 11 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇನ್ನು ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಇದರಲ್ಲಿ 14 ಜನ ಇದ್ದರು ಎಂದು ಮೂಲಗಳು ತಿಳಿಸಿವೆ. ಅದರಲ್ಲೀಗ 11 ಮಂದಿಯ ಮೃತದೇಹ ಪತ್ತೆಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಅದರಲ್ಲೂ ಈಗ ಸಿಡಿಎಸ್ ಜನರಲ್ ಬಿಪಿನ್ ರಾವತ್ರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕಿದೆ. ಸದ್ಯ ಮೂಲಗಳ ಪ್ರಕಾರ ಬಿಪಿನ್ ರಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಇನ್ನು ಸೇನಾ ವಿಮಾನ ಪತನವಾಗಿದ್ದು ನೀಲಗಿರಿ ಬೆಟ್ಟ ಪ್ರದೇಶದಲ್ಲಿ ಆಗಿದ್ದರಿಂದ ರಕ್ಷಣಾ ಕಾರ್ಯಾಚರಣೆಯೂ ತುಸು ತೊಡಕಾಗಿದೆ. ಸ್ಥಳೀಯರ ಸಹಾಯದಿಂದ ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಮತ್ತು ಮೃತರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ಕಳಿಸಲಾಗಿದೆ. ತಮಿಳುನಾಡು ಸರ್ಕಾರದ ಉನ್ನತ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಕೂಡ ಅಪಘಾತವಾದ ಸ್ಥಳಕ್ಕೆ ಧಾವಿಸಿದ್ದಾರೆ. ಅಂದಹಾಗೆ ಈ ಹೆಲಿಕಾಪ್ಟರ್ ದೆಹಲಿಯಿಂದ ಸುಲುರ್ಗೆ ಹೊರಟಿತ್ತು ಎಂದು ಮಾಹಿತಿ ಲಭ್ಯವಾಗಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…