ಉಡುಪಿ : ಮಲ್ಪೆಗೆ ಆಗಮಿಸಿದ್ದ ಬ್ಲಾಗರ್‌ಗೆ ಸೈಂಟ್ ಮೇರಿಸ್ ಐಲ್ಯಾಂಡ್ ಸಿಬಂದಿ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಹಲ್ಲೆಗೆ ಯತ್ನಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ
ಮಲ್ಪೆ ಬೀಚ್ ಒಳಹೊಕ್ಕಾಗಿ ವಿವಿಧೆಡೆ ಸುಂಕ ಪಾವತಿಸಿ ತೆರಳುವ ಪ್ರವಾಸಿಗರಿಗೆ ಇಲ್ಲಿನ ವ್ಯವಸ್ಥೆಗಳು ಬೇಸರ ತರಿಸುತ್ತಿವೆ. ಸಖತ್ ಕಂಟೆಂಟ್ಸ್ ಹೆಸರಿನಲ್ಲಿರುವ ಫೇಸ್‌ಬುಕ್ ಪೇಜ್‌ನ ಪ್ರವಾಸಿ ಬ್ಲಾಗರ್ ಮಲ್ಪೆಯ ಸೈಂಟ್ ಮೇರಿಸ್ ಐಲ್ಯಾಂಡ್‌ಗೆ ತೆರಳಲು ಬೈಕ್‌ನಲ್ಲಿ ಆಗಮಿಸಿದ್ದ. ಮಲ್ಪೆ ಸೀ ವಾಕ್ ಬಳಿ ಬೈಕ್ ಪಾರ್ಕಿಂಗ್‌ಗೆ ಶುಲ್ಕ ಪಾವತಿಸಿದ್ದಾನೆ. ಪಾರ್ಕಿಂಗ್ ಶುಲ್ಕ ಪಡೆದವರು ಕೆಮರಾಕ್ಕೆಂದು ಶುಲ್ಕ ಪಡೆದಿದ್ದರು. ಆದರೆ ಐಲ್ಯಾಂಡ್ ತಲುಪಿದ ಬಳಿಕ ಪ್ರತ್ಯೇಕ ಕೆಮರಾ ಶುಲ್ಕ ಕಟ್ಟಬೇಕು ಎಂದು ಸಿಬಂದಿ ಹೇಳಿದಾಗ ನಡೆದ ಮಾತಿನ ಜಟಾಪಟಿಯನ್ನು ಬ್ಲಾಗರ್ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಅಪ್ ಲೋಡ್ ಮಾಡಿದ್ದು, ಸಿಬಂದಿಯ ವರ್ತನೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ವರದಿಗೆ ಜಿಲ್ಲಾಧಿಕಾರಿ ಸೂಚನೆ
ಈ ಘಟನೆಯ ವಿವರನ್ನು ಪಡೆದುಕೊಳ್ಳಲಾಗುತ್ತಿದೆ. ನಗರಸಭೆ ಪೌರಾಯುಕ್ತರಿಗೆ ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿಯಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…