Featured

ಸೈಬರ್ ವಂಚಕರ ಬಲೆಗೆ ಬಿದ್ದ ವಕೀಲೆ –  ಅಧಿಕಾರಿಗಳ ಸೋಗಿನಲ್ಲಿ  ವಿವಸ್ತ್ರ ಗೊಳಿಸಿ ಬ್ಲಾಕ್ ಮೇಲ್ ಮಾಡಿ 14 ಲಕ್ಷ ವಸೂಲಿ – Vishwanews24

ಸೈಬರ್ ವಂಚಕರ ಬಲೆಗೆ ಬಿದ್ದ ವಕೀಲೆ –  ಅಧಿಕಾರಿಗಳ ಸೋಗಿನಲ್ಲಿ  ವಿವಸ್ತ್ರ ಗೊಳಿಸಿ ಬ್ಲಾಕ್ ಮೇಲ್ ಮಾಡಿ 14 ಲಕ್ಷ ವಸೂಲಿ

ಬೆಂಗಳೂರು : ಕಾನೂನು ತಿಳಿದಿರುವ ವಕಿಲೇಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಅಕ್ಷರಶಃ ಎರಡು ದಿನ ಸೈಬರ್ ಒತ್ತೆಯಾಳಾಗಿದ್ದ ಘಟನೆ ನಡೆದಿದ್ದು, ವಕೀಲೆಯನ್ನು ಕ್ಯಾಮರಾ ಎದುರು ಬೆತ್ತಲೆಯಾಗುವಂತೆ ಮಾಡಿದ ವಂಚಕರು ಆಕೆಯಿಂದ 14 ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದಾರೆ. ವಕೀಲೆಯ ಬೆತ್ತಲೆ ವಿಡಿಯೋಗಳನ್ನು ಬಳಸಿಕೊಂಡು, ಬ್ಲ್ಯಾಕ್‌ಮೇಲ್ ಮೂಲಕ ಮತ್ತೆ 10 ಲಕ್ಷ ರೂ ಸುಲಿಗೆ ಮಾಡಲು ಪ್ರಯತ್ನಿಸಿದ್ದಾರೆ. ಕಾನೂನು ಹಾಗೂ ಸೈಬರ್ ವಂಚನೆಯ ಕುರಿತಾದ ತಿಳಿವಳಿಕೆ ಹೊಂದಿದ್ದರೂ, ಸ್ಕ್ಯಾಮರ್‌ಗಳ ಜಾಲಕ್ಕೆ ಬಿದ್ದ ಮಹಿಳೆ ಕೊನೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

29 ವರ್ಷದ ವಕೀಲೆಯೊಬ್ಬರಿಗೆ ಫೆಡ್ ಎಕ್ಸ್ ಎಂಬ ಕೆಂಪೆನಿಯಿಂದ ಪಾರ್ಸೆಲ್ ಬಂದಿದೆ ಎಂದು ಹೇಳಿರುವ ತಂಡ ಅದರಲ್ಲಿ ಐದು ಪಾಸ್‌ಪೋರ್ಟ್, ಮೂರು ಕ್ರೆಡಿಟ್ ಕಾರ್ಡ್‌ಗಳು ಹಾಗೂ ನಿಷೇಧಿತ ಮಾದಕವಸ್ತು ಎಂಡಿಎಂಎ 140 ಮಾತ್ರೆಗಳಿವೆ ಎಂದು ತಿಳಿಸಿದ್ದರು. ಆದರೆ ಆ ಪಾರ್ಸೆಲ್‌ಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ವಕೀಲೆ ಪ್ರತಿಕ್ರಿಯೆ ನೀಡಿದ್ದರು. ಆಗ ಪಾರ್ಸೆಲ್ ಕಂಪೆನಿ ಸೋಗಿನಲ್ಲಿ ಮಾತನಾಡಿದ್ದ ವಂಚಕರು, ತಮ್ಮ ಹೆಸರಿನಲ್ಲಿ ವಂಚನೆ ನಡೆದಿರುವ ಬಗ್ಗೆ ಮುಂಬಯಿಯ ಸೈಬರ್ ಟೀಮ್‌ಗೆ ದೂರು ನೀಡುವಂತೆ ಸಲಹೆ ನೀಡಿದ್ದರು. ಇದಕ್ಕೆ ವಕೀಲೆ ಒಪ್ಪಿದಾಗ, ಕರೆಯನ್ನು ‘ಸೈಬರ್ ಅಪರಾಧ ತಂಡ’ಕ್ಕೆ ವರ್ಗಾಯಿಸಿದ್ದರು.

ನಾನು ಸ್ಕೈಪ್ ಡೌನ್‌ಲೋಡ್ ಮಾಡಿ, ಅವರನ್ನು ಸಂಪರ್ಕಿಸಿದೆ. ಅವರು ನನ್ನ ಬಳಿ ಅಕ್ರಮ ಪಾರ್ಸೆಲ್ ಬಗ್ಗೆ ವಿಚಾರಿಸಿದರು. ಜತೆಗೆ ನನ್ನ ಆಧಾರ್ ಕಾರ್ಡ್ ಮಾಹಿತಿ ಕೇಳಿದರು. ಇದರ ನಂತರ ಅವರ ‘ಉನ್ನತ ಅಧಿಕಾರಿ’ಗಳ ಮೂಲಕ ಅದನ್ನು ಪರಿಶೀಲಿಸಿದರು. ನನ್ನ ಆಧಾರ್ ಕಾರ್ಡ್ ಅನ್ನು ಮಾನವ ಕಳ್ಳಸಾಗಣೆ ಹಾಗೂ ಡ್ರಗ್ಸ್ ಸಾಗಣೆಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಹೈ ಅಲರ್ಟ್ ನೀಡಲಾಗಿದೆ ಎಂದರು. ಬಳಿಕ ಸ್ಕೈಪ್ ಕರೆಯನ್ನು ಅಭಿಷೇಕ್ ಚೌಹಾಣ್ ಎಂಬ ಹಿರಿಯ ಸಿಬಿಐ ಅಧಿಕಾರಿಗೆ ವರ್ಗಾಯಿಸಿದರು. ನನ್ನ ಕ್ಯಾಮೆರಾ ಆನ್ ಮಾಡಿ ಮಾತನಾಡುವಂತೆ ಅವರು ನಿರ್ದೇಶಿಸಿದರು” ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೆ ವಕಿಲೇಯಿಂದ 14 ಲಕ್ಷ ಹಣವನ್ನು ಬೇರೆ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಲ್ಲದೇ ವಕೀಲೆಯನ್ನು ಎರಡು ದಿನ ಸೈಬರ್ ಒತ್ತೆಯಾಳಾಗಿ ಇಟ್ಟುಕೊಂಡಿದ್ದರು. ಇಷ್ಟೆಲ್ಲಾ ಹಣ ವರ್ಗಾವಣೆ ಆದ ಬಳಿಕ ಆತ ‘ಮಾದಕವಸ್ತು ಪರೀಕ್ಷೆ’ ನಡೆಸಬೇಕು. ಇದಕ್ಕಾಗಿ ಬಟ್ಟೆ ಕಳಚಿ ಎಂದು ಆದೇಶಿಸಿದ್ದ. ಕ್ಯಾಮೆರಾ ಎದುರು ಆಕೆ ಉಡುಪುಗಳನ್ನು ಕಳಚಿದ್ದರು. “ಹಾಗೆ ಮಾಡದೆ ಇದ್ದರೆ, ನನ್ನನ್ನು ಮತ್ತು ನನ್ನ ಕುಟುಂಬವನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗುವುದು. ನನ್ನನ್ನು ಹಾಗೂ ನನ್ನ ಕುಟುಂಬವನ್ನು ಸಾಯಿಸಲಾಗುವುದು ಎಂದು ಬೆದರಿಕೆ ಹಾಕಿ ನಿಂದಿಸಿದ್ದ” ಎಂದು ಆಕೆ ತಿಳಿಸಿದ್ದಾರೆ.

ಇದರ ಬಳಿಕ ಆಕೆಯ ಬೆತ್ತಲೆ ವಿಡಿಯೋಗಳನ್ನು ಇರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡತೊಡಗಿದ್ದ. ಅದೇ ದಿನ ಮಧ್ಯಾಹ್ನ 3 ಗಂಟೆ ಒಳಗೆ 10 ಲಕ್ಷ ರೂ ನೀಡದೆ ಹೋದರೆ ಡಾರ್ಕ್ ವೆಬ್‌ ಹಾಗೂ ಹಲವಾರು ಜನರಿಗೆ ವಿಡಿಯೋಗಳನ್ನು ಮಾರಾಟ ಮಾಡುವುದಾಗಿ ಬೆದರಿಸಿದ್ದ. ಇದರ ಬಳಿಕ ಆಕೆ ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago