Featured

ಸೊರಕೆಯವರು ಅಗ್ಗದ ಪ್ರಚಾರ, ಕೋಟಿ ಲೆಕ್ಕಗಳನ್ನು ನೀಡುದನ್ನು ಬಿಟ್ಟು ವಾಸ್ತವಿಕ ಸತ್ಯಂಶವನ್ನು ತಿಳಿದುಕೊಳ್ಳುವುದು ಉತ್ತಮ : ಶಾಸಕ ಲಾಲಾಜಿ ಟಾಂಗ್

ಕಾಪು: ಕರ್ನಾಟಕದಲ್ಲಿ ಕಳೆದ ತಿಂಗಳವರೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ಸ್ಥಳೀಯ ಶಾಸಕರು ಶಿಫಾರಸ್ಸು ಮಾಡಿದಾಗಲೂ ಅಭಿವೃದ್ಧಿ ಕಾರ್ಯಗಳ ಸ್ಥಗಿತಕ್ಕೆ ಹಾಗೂ ಕೆಲವು ಅಸಮರ್ಥ ಅಧಿಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡಿ ತೆರೆಮರೆಯ ರಾಜಕಾರಣದಿಂದಾಗಿಯೇ, ಅಭಿವೃದ್ಧಿಯ ಕುಂಠಿತಕ್ಕೆ ಕೈ ಆಡಿಸಿದ್ದಾರೆ ಕೈ ಪಕ್ಷದ ಮಾಜಿ ಶಾಸಕರು.

ತರಾತುರಿಯಲ್ಲಿ ಸರಿಯಾದ ಜನಸಂಖ್ಯೆ ಆಧಾರದ ಅಂಶ ಕೊಡದೆ ಪುರಸಭೆ ಘೋಷಣೆ ಮಾಡಿ ವರ್ಷಕ್ಕೆ 150 ಕೋಟಿ ತರುತ್ತೇನೆಂದು ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿ ಎಷ್ಟು ಅನುದಾನ ಸಿಕ್ಕಿದೆಯೆಂದು ನಮಗೂ ಗೊತ್ತಿದೆ. ಜನರು ನಂಬಿ ಕುಳಿತುಕೊಳ್ಳಲು ಮೂರ್ಖರಲ್ಲ! ಕಾಪು ಪುರಸಭೆಯ ವ್ಯಾಪ್ತಿಯಲ್ಲಿ ಜನರಿಗೆ ಮನೆ ಕಟ್ಟಲು ಈಗ ಇರುವ ಸಮಸ್ಯೆ, ಏಕಮುಖ ಬಡಾವಣೆ ಸಮಸ್ಯೆ, ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕದಿಂದ ವಂಚಿತ, ಸರಿಯಾದ ಯೋಜನಾ ಬದ್ಧವಲ್ಲದ ಒಳಚರಂಡಿ ಅವ್ಯವಸ್ಥೆಯಿಂದಾಗಿ ಕಾಮಗಾರಿ ಸ್ಥಗಿತ, ಕಸ ವಿಲೇವಾರಿ ಘಟಕ ಈಗ ಘನ ತ್ಯಾಜ ಶೇಖರಣಾ ಘಟಕವಾಗಿ ರೂಪುಗೊಂಡಿದೆ. ಇದರ ನೂರು ಮೀಟರ್ ವ್ಯಾಪ್ತಿಯಲ್ಲಿ ಶಾಲಾ, ಕಾಲೇಜು ಇದ್ದು 1000 ಮಕ್ಕಳು ದಿನನಿತ್ಯ ದುರ್ವಾಸನೆಯಿಂದಾನೆ ಶಾಲೆಗೆ ಹೋಗಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ನನ್ನ ಶಾಸಕತ್ವ ಅವಧಿಯಲ್ಲಿ ಶಾಲಾ ಕಾಲೇಜು, ತಾಂತ್ರಿಕ ಶಿಕ್ಷಣ ವಿದ್ಯಾ ಸಂಸ್ಥೆಗಳು, ರಸ್ತೆಗಳ, ಬೃಹತ್ ಸೇತುವೆಗಳು, ಕಡಲ್ ಕೊರೆತಕ್ಕೆ ತಡೆಗೋಡೆ, ವಸತಿ ಯೋಜನೆ ಮುಂತಾದ ಯೋಜನೆಗಳ ಅಭಿವೃದ್ಧಿ ಬಗ್ಗೆ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಸರಿಯಾದ ಪೂರ್ವ ತಯಾರಿಯಿಲ್ಲದೆ ಕಾಪು ಹೊಸ ತಾಲೂಕು ಘೋಷಣೆ ಮಾಡಿದ್ದೂ ಕನಿಷ್ಠ 32 ಇಲಾಖೆಗಳು ಕಾರ್ಯನಿರ್ವಹಿಸಬೇಕಾದಲ್ಲಿ ಈ ತನಕ ಎರಡು ಮೂರು ಇಲಾಖೆಗಳು ಕಾರ್ಯ ನಿರ್ವಹಿಸುತ್ತಿದೆ. ನನ್ನ ಬೇಡಿಕೆ ಮೇರೆಗೆ ಈಗಾಗಲೇ ಮಿನಿ ವಿಧಾನಸೌಧಕ್ಕೆ ಪ್ರಾಥಮಿಕ ಹಂತದ ಸರ್ವೇ ಕೂಡ ಮಾಡಲಾಗಿದೆ, ಅನುದಾನ ಭರವಸೆ ಕೂಡ ಸಿಕ್ಕಿದೆ, ಮಾಜಿ ಶಾಸಕರ ಅಗ್ಗದ ಪ್ರಚಾರ, ಕೋಟಿ ಲೆಕ್ಕಗಳನ್ನು ನೀಡುದನ್ನು ಬಿಟ್ಟು ವಾಸ್ತವಿಕ ಸತ್ಯಂಶವನ್ನು ತಿಳಿದುಕೊಳ್ಳುವುದು ಉತ್ತಮ. ಮುಂದಿನ ದಿನಗಳಲ್ಲಿ ಸನ್ಮಾನ್ಯ ಯಡಿಯೂರಪ್ಪ ರವರ ನೇತೃತ್ವದ ಸರಕಾರ ಉತ್ತಮ ಆಡಳಿತ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಏoದು ಕಾಪು  ಶಾಸಕ ಲಾಲಾಜಿ ಆರ್ ಮೆಂಡನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

 

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago