ಪಡುಬಿದ್ರಿ : “ಹೆಜಮಾಡಿ ಸಮುದ್ರ ತೀರದ ಮುಟ್ಟಾಲುವೆ ಬಳಿ ಹೆಜಮಾಡಿ ಹಾಗೂ ಪಡುಬಿದ್ರಿ ಸಂಪರ್ಕ ರಸ್ತೆ ನಡೆಸುವ ನಿಟ್ಟಿನಲ್ಲಿ ಮಾಜಿ ಶಾಸಕರ ಉಸ್ತುವಾರಿಯಲ್ಲಿ ನಡೆದ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದು ಅಂದಿನ ಶಾಸಕರ ಅಧಿಕಾರ ದುರುಪಯೋಗದ ಫಲ” ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಹಾಲಿ ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಕಾರ್ಯಕರ್ತರೊಂದಿಗೆ ಹೆಜಮಾಡಿ ಸೇತುವೆಯ ಬಳಿಗೆ ಆಗಮಿಸಿ ಪರಿಶೀಲಿಸಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, “ಮೇಲ್ನೋಟಕ್ಕೆ ಈ ಒಟ್ಟು ಕಾಮಗಾರಿಯೇ ಅವೈಜ್ಞಾನಿಕವಾಗಿ ಕಾಣುತ್ತಿದ್ದು, ಮಾಜಿ ಶಾಸಕ ವಿನಯಕುಮಾರ್ ಸೊರಕೆ ಒತ್ತಡ ಹೇರಿದ್ದರಿಂದ ಅಧಿಕಾರಿಗಳು ತಪ್ಪು ಕೆಲಸ ಮಾಡಿದ್ದಾರೆ. ಇಲ್ಲಿ ಸಮುದ್ರಕ್ಕೆ ನೀರು ಹರಿದು ಹೋಗುವ ಬದಲು ಸಮುದ್ರದಿಂದ ಹೊರಗಡೆ ನೀರು ಹರಿಯುವಂತಾಗಿದೆ. ಕೃಷಿ ಚಟುವಟಿಕೆ ನಡೆಸಲಾಗದೆ ಈ ಭಾಗದ ಕೃಷಿಕರು ಈ ಕಾಮಗಾರಿಯಿಂದ ಕಂಗಾಲಾದ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಅಧಿಕಾರಿಗಳಲ್ಲಿ ಚರ್ಚಿಸಿ ಈ ಕಾಮಗಾರಿಯನ್ನು ಉಳಿಸಬೇಕೋ, ಅಳಿಸಬೇಕೋ ನಿರ್ಧರಿಸಲಾಗುವುದು” ಎಂದರು. ಈ ಸಂದರ್ಭ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…