Featured

ಸೋನಿಯಾ ಗಾಂಧಿ ಪರಮಾಪ್ತ ವಡಕ್ಕನ್ ಬಿಜೆಪಿಗೆ ಸೇರ್ಪಡೆ – Vishwanews24

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೇಶಾದ್ಯಂತ ಪಕ್ಷಾಂತರಿಗಳೇ ಸದ್ದು ಮಾಡುತ್ತಿದ್ದಾರೆ. ಇದಕ್ಕೆ ಗುರುವಾರ ಹೊಸ ಸೇರ್ಪಡೆಯಾಗಿದೆ. ಕಾಂಗ್ರೆಸ್‌ಗೆ ತೀವ್ರ ಮುಜುಗರವೆಂಬಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪರಮಾಪ್ತ ಮತ್ತು ಪಕ್ಷದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕೇರಳದ ಕಾಂಗ್ರೆಸ್‌ ನಾಯಕ ಟಾಮ್‌ ವಡಕ್ಕನ್‌ ಅವರು ದಿಢೀರನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗುರುವಾರ ನಡೆದ ಈ ಬೆಳವಣಿಗೆಯು ಕಾಂಗ್ರೆಸ್‌ಗೆ ಆಘಾತ ತಂದಿದೆ.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪುಲ್ವಾಮಾ ಉಗ್ರ ದಾಳಿಯ ನಂತರ ಕೇಂದ್ರ ಸರಕಾರ ಕೈಗೊಂಡ ದಿಟ್ಟ ಕ್ರಮಗಳಿಗೆ ಕಾಂಗ್ರೆಸ್‌ ಸರಿಯಾದ ಸ್ಪಂದನೆ ನೀಡಲಿಲ್ಲ. ಶತ್ರು ದೇಶದ ಮೇಲಿನ ದಾಳಿ ವಿಷಯದಲ್ಲಿ ಕಾಂಗ್ರೆಸ್‌ನ ಲಘುವಾಗಿ ವರ್ತಿಸಿತು. ಇದರಿಂದ ನನ್ನ ಮನಸ್ಸಿಗೆ ತೀವ್ರ ನೋವಾಯಿತು. ಪಕ್ಷ ತೊರೆಯಲು ಇದೇ ಕಾರಣ,” ಎಂದರು.

ಇದೇ ವೇಳೆ, ರಾಹುಲ್‌ ಗಾಂಧಿ ನಾಯಕತ್ವದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ”ಎರಡು ದಶಕಗಳ ಕಾಲ ನಾನು ಆ ಪಕ್ಷಕ್ಕಾಗಿ ದುಡಿದಿದ್ದೇನೆ. ಅದಕ್ಕೆ ಪ್ರತಿಯಾಗಿ ಏನನ್ನೂ ಪಡೆಯಲಿಲ್ಲ. ಬಳಸಿಕೊಂಡು ಬಿಸಾಡುವ ಕೆಟ್ಟ ಸಂಪ್ರದಾಯವನ್ನು ಕಾಂಗ್ರೆಸ್‌ ಅನುಸರಿಸುತ್ತಿದೆ. ವಂಶಪಾರಂಪರ್ಯ ರಾಜಕಾರಣವೂ ಆ ಪಕ್ಷದಲ್ಲಿ ಮೇರೆ ಮೀರಿದೆ,” ಎಂದು ಟೀಕಿಸಿದರು.

ಬಿಜೆಪಿಗೆ ಸೇರ್ಪಡೆಯಾದ ಟಾಮ್‌ ವಡಕ್ಕನ್‌ ಮತ್ತು ಅರ್ಜುನ್‌ ಸಿಂಗ್‌, ಪುಲ್ವಾಮಾ ದಾಳಿ ಬಳಿಕ ತಮ್ಮ ತಮ್ಮ ಪಕ್ಷಗಳು ಮತ್ತು ನಾಯಕರು ನೀಡಿರುವ ಹೇಳಿಕೆಗಳಿಂದ ನೊಂದು ಪಕ್ಷ ತ್ಯಜಿಸಿರುವುದಾಗಿ ಹೇಳಿದ್ದಾರೆ.

ಟಾಮ್ ವಡಕ್ಕನ್ ಯಾರು?:
ಸೋನಿಯಾ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾಗ ಟಾಮ್ ವಡಕ್ಕನ್ ಅವರು ಮಾಧ್ಯಮ ಸಲಹೆಗಾರರಾಗಿದ್ದರು. ಈ ಮೂಲಕ ಸುಮಾರು 20 ವರ್ಷಗಳಿಂದ ಪಕ್ಷದಲ್ಲಿದ್ದು, ಸೋನಿಯಾ ಗಾಂಧಿ ಅವರ ನಿಕಟವರ್ತಿ ಹಾಗೂ ಕಾಂಗ್ರೆಸ್ ವಕ್ತಾರರಾಗಿ ಟಾಮ್ ಕೆಲಸ ಮಾಡಿದ್ದಾರೆ. ಆದರೆ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಬರುತ್ತಿದ್ದಂತೆ ಹೊಸ ಮಾಧ್ಯಮ ಸಲಹಾ ತಂಡವನ್ನು ರಚಿಸಿಕೊಂಡರು. ಇದರಿಂದಾಗಿ ಟಾಮ್ ಕಡೆಗಣಿಸಲ್ಪಟ್ಟಿದ್ದರು. ಅಷ್ಟೇ ಅಲ್ಲದೇ ಕೇರಳದಿಂದ ಲೋಕಸಭೆ ಚುನಾವಣಾ ಕಣಕ್ಕೆ ಇಳಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಹಿಂದೇಟು ಹಾಕಿತ್ತು. ಈ ಎಲ್ಲ ಬೆಳವಣಿಗೆಯಿಂದಾಗಿ ಟಾಮ್ ಅವರು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago