ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.
ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…