ಬೆಂಗಳೂರು: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇ.ಡಿ ನೋಟಿಸ್ ಕೊಡಿಸುವ ಮೂಲಕ ಬೆಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದರು.
ಇ.ಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಅಧಿಕಾರ ದುರುಪಯೋಗ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದೆ ಬಿಜೆಪಿ. ಯಾವುದೇ ವಿಷಯ ಇಲ್ಲದಿದ್ದರೂ ತನಿಖೆಗೆ ಕರೆಯುತ್ತಿದೆ. ದ್ವೇಷದ ರಾಜಕೀಯ ಜನ ಸಹಿಸಲ್ಲ, ಸೋನಿಯಾ ರಾಹುಲ್ ಕ್ಲೀನ್ ಚಿಟ್ ಪಡೆದುಕೊಂಡು ಬರುತ್ತಾರೆ ಎಂದರು. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರ ಜೊತೆಗಿದ್ದಾರೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸತ್ಯಕ್ಕೆ ಜಯ ಸಿಗುತ್ತದೆ. ಗಾಂಧಿ ಕುಟುಂಬ ಈ ದೇಶಕ್ಕೆ ತ್ಯಾಗ ಸೇವೆ ಮಾಡಿದೆ. ಹಾಗಿದ್ದರೂ ಈ ಪರಿವಾರಕ್ಕೆ ಕಿರುಕುಳ ಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ರೋಸಿ ಹೊಗಿದ್ದಾರೆ ಎಂದು ಕಿಡಿಕಾರಿದರು.
ಯಾವುದೇ ನಯ ಪೈಸೆ ಗಾಂಧಿ ಕುಟುಂಬಕ್ಕೆ ಹೋಗಿಲ್ಲ.ಆದರೂ ಜನರಿಗೆ ಮೋಸ ಮಾಡುವ ಕೆಲಸ ಈ ಸರ್ಕಾರ ಮಾಡುತ್ತಿದೆ. ಪತ್ರಿಕೆ ಉಳಿಸಲು ನಷ್ಟದಲ್ಲಿರುವಾಗ ಗಾಂಧಿ ಕುಟುಂಬ ಮಧ್ಯ ಪ್ರವೇಶ ಮಾಡಿದೆ. ಮಾನಸಿಕ ಕಿರುಕುಳ ನಿಡುವ ಉದ್ದೇಶದಿಂದ ಸುಳ್ಳು ಕೇಸ್ ಹಾಕಲಾಗಿದೆ ಎಂದರು.
ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಆಡಳಿತ ಮಾಡುವಲ್ಲಿ ವಿಫಲವಾಗಿದೆ. ವಿರೋಧ ಪಕ್ಷಗಳಿಗೆ ಕಿರುಕುಳ ನೀಡುವ ನಿಟ್ಟಿನಲ್ಲಿ ಹಾಗೂ ಅವರ ಆತ್ಮಸ್ಥೈರ್ಯ ಕುಗ್ಗಿಸುವ ನಿಟ್ಟಿನಲ್ಲಿ ನೋಟಿಸ್ ನೀಡಲಾಗಿದೆ. ಅಕ್ರಮ ಹಣ ಎಲ್ಲಿ ವರ್ಗಾವಣೆ ಆಗಿದೆ? ಇ.ಡಿ ಕೇಂದ್ರದ ಕೈಗೊಂಬೆಯಾಗಿದೆ ಎಂದು ಆರೋಪಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…