ಯಾದಗಿರಿ: ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲರೂ ನಮ್ಮ ಜೊತೆಯಲ್ಲಿಯೇ ಇದ್ದಾರೆ, ಇರುತ್ತಾರೆ ಕೂಡಾ. ಬೆಂಗಳೂರಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿ ಮಾಡಿ ಮಾತನಾಡುತ್ತೇನೆ. ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದರು.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಾಗಳಿಗೆ ತೆರೆ ಎಳೆದರು. ಮಾಡಾಳ್ ವಿರೂಪಾಕ್ಷ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ವಾಸ್ತವಿಕ ಸ್ಥಿತಿ ಏನು ಎನ್ನುವುದು ನಿಮಗೇ ಗೊತ್ತಿದೆ. ಅದ್ದೂರಿ ಮೆರವಣಿಗೆ ಬಗ್ಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಒಟ್ಟಿನಲ್ಲಿ ಅವರಿಗೆ ಕೋರ್ಟಿನಿಂದ (Court) ರಿಲೀಫ್ ಸಿಕ್ಕಿದೆ. ಮಾಡಾಳ್ ಅವರ ಮೇಲೆ ಪಕ್ಷದಿಂದ ಕ್ರಮ ಕೈಗೊಳ್ಳುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದರು.
ಮೋದಿ, ಅಮಿತ್ ಶಾ ಎಷ್ಟೇ ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಸಿದ್ದರಾಮಯ್ಯನವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ, ಈ ರೀತಿ ಮಾತನಾಡುವುದು ಅವರ ಸ್ವಭಾವ. ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಟೀಕೆ ಮಾಡಲು ಇಷ್ಟಪಡುವುದಿಲ್ಲ ಎಂದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…