ಸೋಮವಾರ ರಾಶಿ ಭವಿಷ್ಯ ಇಲ್ಲಿದೆ ನೋಡಿ: vishwanews24

ಮೇಷ ರಾಶಿ
ಸಂಗಾತಿ ಜತೆಗೆ ಪ್ರವಾಸ, ಸುಂದರ ಕ್ಷಣ ಕಳೆಯುವ ಅವಕಾಶ ನಿಮ್ಮದಾಗಲಿದೆ. ಆದರೆ ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ಸಂತಸಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಬಂಧು ಮಿತ್ರರ ಮನೆಗೆ ಭೇಟಿ ನೀಡುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ವೃಷಭ ರಾಶಿ:
ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿ ಬರಲಿವೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಚಿಂತನೆ ಮಾಡುವರು. ಅಪರಿಚಿತರನ್ನು ನಂಬಿ ಹೂಡಿಕೆ ಮಾಡುವ ಮುನ್ನ ಎಚ್ಚರವಾಗಿರಿ.

ಮಿಥುನ ರಾಶಿ:
ಕುಲದೇವರ ಹರಕೆ ತೀರಿಸಲು ಮುಂದಾಗುವಿರಿ. ನೂತನ ದಂಪತಿಗಳಲ್ಲಿ ವಿರಸ ಮೂಡಬಹುದು. ತಾಳ್ಮೆಯಿಂದಿರುವುದು ಮುಖ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು.

ಕರ್ಕಟಕ ರಾಶಿ:
ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ಹೆಚ್ಚುವುದು. ಕಷ್ಟದಲ್ಲಿರುವವರಿಗೆ ನೆರವಾಗುವಿರಿ. ಮಾನಸಿಕ ದುಗುಡಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವುದರಿಂದ ಮನಸ್ಸು ಹಗುರವಾಗುವುದು. ಗೃಹೋಪಯೋಗಿ ವಸ್ತುಗಳಿಗೆ ಧನವ್ಯಯವಾಗುವುದು.

ಸಿಂಹ ರಾಶಿ:
ದೈವಾನುಕೂಲದಿಂದ ಇಂದು ನೀವು ಕೈ ಹಿಡಿದ ಕೆಲಸಗಳು ಸುಗಮವಾಗಿ ನೆರವೇರಲಿದೆ. ಬಂಧು ಮಿತ್ರರ ಆಗಮನ ಖುಷಿ ಇಮ್ಮಡಿಗೊಳಿಸಲಿದೆ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ವಾರ್ತೆಗಳನ್ನು ಕೇಳುವಿರಿ. ಕಾರ್ಯನಿಮಿತ್ತ ಓಡಾಟ ಹೆಚ್ಚುವುದು.

ಕನ್ಯಾ ರಾಶಿ:
ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸುವಿರಿ. ಮನಸ್ಸಿಗೆ ಖುಷಿ ಕೊಡುವ ಕೆಲಸದಲ್ಲಿ ತೊಡಗಿಸಿಕೊಳ್ಳುವಿರಿ. ಸಂಗಾತಿಯ ಮಾತಿಗೆ ಬೆಲೆ ಕೊಡಬೇಕಾಗುತ್ತದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಇಷ್ಟದೇವರ ಪ್ರಾರ್ಥನೆ ಮಾಡಿ.

ತುಲಾ ರಾಶಿ:
ಪಾಲು ಬಂಡವಾಳ ಹೂಡಿಕೆ ಮಾಡಿದವರಿಗೆ ಲಾಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಗಳಿಸುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ನಿರೀಕ್ಷೆ. ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಸಾಲಗಾರರ ಹಣ ಮರುಪಾವತಿಯಾಗುವುದು.

ವೃಶ್ಚಿಕ ರಾಶಿ:
ಕೌಟುಂಬಿಕವಾಗಿ ನೀವು ತೆಗೆದುಕೊಳ್ಳುವ ಕೆಲವೊಂದು ನಿರ್ಧಾರಗಳು ಎಲ್ಲರಿಗೂ ಪಥ್ಯವಾಗದೇ ಹೋಗಬಹುದು. ಆಸ್ತಿ ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆ ಒಳ್ಳೆಯದು. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಕೇಳಿಬರುವುದು.

ಧನು ರಾಶಿ:
ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ದೈವಾನುಕೂಲದಿಂದ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗುವುದು. ಇಷ್ಟ ಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ್ಯತೆಯಿದೆ.

ಮಕರ ರಾಶಿ:
ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು. ಸಹೋದ್ಯೋಗಿಗಳ ಸಹಕಾರ ಸಿಗುವುದು. ಕೃಷಿಕರಿಗೆ ಕೊಂಚ ಹಿನ್ನಡೆಯಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು.

ಕುಂಭ ರಾಶಿ:
ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೂ ಅಸೂಯೆಪಡುವಂತೆ ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮೀನ ರಾಶಿ:
ಉದ್ಯೋಗ ಸಂಬಂಧವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಉದ್ಯೋಗದಲ್ಲಿ ಎಷ್ಟೇ ಪ್ರಗತಿಯಿದ್ದರೂ ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಸುಧಾರಣೆಯಿರುವುದು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago