Featured

ಸೋಮವಾರ ( 28-06-2021) ದಿಂದ ‘ಮೈಸೂರಿಗೆ KSRTC ಬಸ್ ಸಂಚಾರ’ ಆರಂಭ -Vishwanews24

ಸೋಮವಾರ ( 28-06-2021) ದಿಂದ ‘ಮೈಸೂರಿಗೆ KSRTC ಬಸ್ ಸಂಚಾರ’ ಆರಂಭ -Vishwanews24

ಬೆಂಗಳೂರು : ಕೊರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಹಿನ್ನಲೆಯಲ್ಲಿ ಕೆಟಗರಿ 3ರ ವರ್ಗದಲ್ಲಿದ್ದಂತ ಮೈಸೂರು ಜಿಲ್ಲೆಯಲ್ಲಿ, ರಾಜ್ಯ ಸರ್ಕಾರ ಕೆಟಗರಿ 2ರ ವರ್ಗಕ್ಕೆ ಸೇರ್ಪಡೆಗೊಳಿಸಿತ್ತು. ಜೊತೆಗೆ ಲಾಕ್ ಡೌನ್ ನಿಯಮದಲ್ಲೂ ಸಡಿಲಿಕೆ ಮಾಡಿತ್ತು. ಜೊತೆಗೆ ಸಾರಿಗೆ ಸಂಚಾರಕ್ಕೂ ಅನುಮತಿಸಿತ್ತು. ಇದರಿಂದಾಗಿ ಸೋಮವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಮೈಸೂರ ನಗರ, ದೂರ ಮಾರ್ಗಕ್ಕೂ ಆರಂಭಗೊಳ್ಳಲಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಮೈಸೂರು ಜಿಲ್ಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲ ಗೊಳಿಸಿರುವುದರಿಂದ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ದಿನಾಂಕ 28-06-2021ರ ಬೆಳಿಗ್ಗೆ 6 ಗಂಟೆಯಿಂದ ಪ್ರಯಾಣಿಕರ ದಟ್ಟಣೆ, ಅವಶ್ಯಕತೆಗೆ ಅನುಗುಣವಾಗಿ ನಗರ ಸಾರಿಗೆ, ಸಾಮಾನ್ಯ ಸಾರಿಗೆ, ದೂರ ಮಾರ್ಗದ ಸಾರಿಗೆಗಳನ್ನು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸಲಾಗುತ್ತದೆ.

ಸಾರಿಗೆ ಬಸ್ ಗಳಲ್ಲಿ ಸಂಚರಿಸುವಂತ ಪ್ರಯಾಣಿಕರು, ಕೋವಿಡ್-19 ಮಾರ್ಗಸೂಚಿ ಕ್ರಮಗಳಾದಂತ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವಂತ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ತಿಳಿಸಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

7 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

8 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

9 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

10 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

10 hours ago