ಮಹಾನಗರ : ಪಕ್ಷಕ್ಕೆ ಕಳೆದ ಚುನಾವಣೆ ಹಿನ್ನಡೆಯು ಅಪಪ್ರಚಾರವೂ ಸಹಿತ ಬೇರೆ ಬೇರೆ ಕಾರಣಗಳಿಂದಾಗಿ ಸೋಲಾಗಿದ್ದು, ಈ ಸೋಲು ಶಾಶ್ವತವಲ್ಲ. ಮತ್ತೇ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಸಭೆಯ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಚುನಾವಣಾ ಸೋಲಿನ ಬಗ್ಗೆ ವಿಮರ್ಶಿಸಲು ಜಿಲ್ಲಾ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣೆಯ ಸೋಲು ಒಪ್ಪಿಕೊಂಡು ನಾವು ಧೃತಿಗೆಡಬಾರದು. ಕಾರ್ಯಕರ್ತರು ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಲು ಕಾಂಗ್ರೆಸ್ನ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕಾರ್ಯಪ್ರವೃತ್ತರಾಗುವಂತೆ ಕರೆ ನೀಡಿದರು.
ಬಡವರಿಗೆ ಸರಕಾರ ಉತ್ತಮ ಕಾರ್ಯಕ್ರಮಗಳನ್ನು ನೀಡಿದರೂ ಕೂಡ ಈ ಬಗ್ಗೆ ಪ್ರಚಾರ ಮಾಡಲು ಪಕ್ಷದ ಕಾರ್ಯಕರ್ತರು ಮುತುವರ್ಜಿ ವಹಿಸದಿರುವುದೇ ಕಾರಣವಾಗಿದ್ದಲ್ಲದೇ ಬಿಜೆಪಿ ಹಿಂದುತ್ವದ ನೆಲೆಯಲ್ಲಿ ಮತಗಳನ್ನು ವಿಭಜನೆ ಮಾಡಿರುವುದರಿಂದ ಬಿಜೆ ಪಿಗೆ ಭಾರತೀಯ ಪಕ್ಷಕ್ಕೆ ತಾತ್ಕಾಲಿಕ ಗೆಲುವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ಸರಕಾರವನ್ನು ವಚನಭ್ರಷ್ಟ ಸರಕಾರ ಎಂದು ಹೇಳಿರುವುದು ಶೋಚನೀಯ. ಅವರು ಪ್ರಣಾಳಿಕೆಯಲ್ಲಿ ಹೇಳಿದಂತಹ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೊಳಿಸದೇ ಇರುವುದರಿಂದ ಮೋದಿ ನೇತೃತ್ವದ ಸರಕಾರವನ್ನು ವಚನಭ್ರಷ್ಟ ಸರಕಾರ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಕೇಂದ್ರ ಸರಕಾರವನ್ನು ಬದಲಿಸಿ ಕಾಂಗ್ರೆಸ್ ಗೆಲ್ಲಿಸಿ ಎಂದು ಘೋಷಣೆ ಕೂಗುವಂತೆ ಕರೆ ನೀಡಿದರು.
ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಜೆ.ಆರ್. ಲೋಬೋ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಪಿ.ವಿ ಮೋಹನ್, ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಮಮತಾ ಗಟ್ಟಿ, ಇಬ್ರಾಹಿಂ ಕೋಡಿಜಾಲ್, ಧನಂಜಯ ಅಡ್ಪಂಗಾಯ, ಆರ್.ಕೆ. ಪೃಥ್ವಿರಾಜ್, ಈಶ್ವರ್ ಉಲ್ಲಾಳ್, ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಸುರೇಶ್ ಬಲ್ಲಾಳ್, ಶಾಲೆಟ್ ಪಿಂಟೋ, ಉಮಾ ನಾಥ್ ಶೆಟ್ಟಿ, ಲೋಕೇಶ್ ಹೆಗ್ಡೆ, ಎ.ಸಿ. ಭಂಡಾರಿ, ಅಬ್ದುಲ್ಲಾ ಬಿನ್ನು, ಸೇವಾದಳ ಅಶ್ರಫ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಜಿ.ಪಂ.ಸದಸ್ಯರು, ತಾ.ಪಂ. ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…