ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಲು ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಲು ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ : ರಾಹುಲ್ ಗಾಂಧಿ -Vishwanews24
ನವದೆಹಲಿ,: ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ ಎಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ. 2019ರ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಬೇಕಿದೆ. ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಬೇಕಿದೆ. ಪಕ್ಷಕ್ಕೆ ಪುನಶ್ಚೇತನ ನೀಡಬೇಕಿದೆ. ಹೀಗಾಗಿ ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ ಎಂದು ರಾಹುಲ್ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಮುಂದಿನ ನಡೆಯ ಬಗ್ಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕವಾಗಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತಡ ಮಾಡದೆ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಮಾಡಬೇಕು. ಈ ಆಯ್ಕೆಯ ಪ್ರಕ್ರಿಯೆಲ್ಲಿ ತಾನು ಭಾಗವಾಗಿಯೂ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
