Featured

ಸೌಜನ್ಯಳ ಸಾವಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಸರಕಾರ ಹಾಗೂ ತನಿಖಾ ಸಂಸ್ಥೆಗೆ ವೀರೇಂದ್ರ ಹೆಗ್ಗಡೆ ಮನವಿ – Vishwanews24

ಸೌಜನ್ಯಳ ಸಾವಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಸರಕಾರ ಹಾಗೂ ತನಿಖಾ ಸಂಸ್ಥೆಗೆ ವೀರೇಂದ್ರ ಹೆಗ್ಗಡೆ ಮನವಿ

ಬೆಳ್ತಂಗಡಿ: 2012 ರಲ್ಲಿ ನಡೆದ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಒತ್ತಾಯಿಸಿದ್ದಾರೆ.

ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.

ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ. ನಂತರದಲ್ಲಿ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಸದರಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗು ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ಖೇದ ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗು ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು ಹಾಗು ಅದರಂತೆ ಸರಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.

ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಸದರಿ ವಿಚಾರವು ನ್ಯಾಯಾಲಯ, ಸರಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಕು. ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ. ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಹಾಗು ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗು ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago