ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆ ಮನವಿಗಳ ಆದೇಶ ಕಾಯ್ದಿರಿಸಿದ ಹೈಕೋರ್ಟ್‌  – vishwanews24

Featured, ದಕ್ಷಿಣ ಕನ್ನಡ

ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆ ಮನವಿಗಳ ಆದೇಶ ಕಾಯ್ದಿರಿಸಿದ ಹೈಕೋರ್ಟ್‌ 

ಮಂಗಳೂರು: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ಕೋರಿದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಆರೋಪಿ ಕಾರ್ಕಳ ತಾಲ್ಲೂಕಿನ ಕುಕುಂದೂರಿನ ಸಂತೋಷ್‌ ರಾವ್‌ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಮತ್ತು ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಮುಕ್ತಾಯಗೊಳಿಸಿತು.

ದ.ಕ, ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ :  ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಸ್ಥಾಪನೆ – vishwanews24

‘ಸಂತೋಷ್ ರಾವ್ ಮತ್ತು ಚಂದಪ್ಪ ಗೌಡ ಅವರು ಪ್ರಕರಣದ ಮರು ತನಿಖೆಗೆ ಮನವಿ ಮಾಡಿದ್ದಾರೆ. ಈ ಹಿಂದೆ ಸೌಜನ್ಯಾಳ ತಂದೆಯೇ ಮರು ತನಿಖೆ ನಡೆಸುವಂತೆ ಕೋರಿದ್ದರು. ಈ ವಿಚಾರವನ್ನು ಹೈಕೋರ್ಟ್‌ನ ಬೇರೊಂದು ನ್ಯಾಯಪೀಠ ಈ ಹಿಂದೆಯೇ ನಿರ್ಧರಿಸಿದ್ದು, ಮರು ತನಿಖೆಗೆ ನಿರಾಕರಿಸಿತ್ತು. ಈಗ ಅದೇ ಪರಿಹಾರ ಕೋರಲಾಗದು’ ಎಂಬ ಸಿಬಿಐ ವಾದ ಹಾಗೂ ಇದಕ್ಕೆ ಪ್ರತಿವಾದ ಆಲಿಸಿದ ನ್ಯಾಯಪೀಠ, ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.

ಮಂಗಳೂರು : ಮಣ್ಣು ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಣೆ – vishwanews24

Leave a Reply