ಮಂಗಳೂರು: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ಕೋರಿದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಆರೋಪಿ ಕಾರ್ಕಳ ತಾಲ್ಲೂಕಿನ ಕುಕುಂದೂರಿನ ಸಂತೋಷ್ ರಾವ್ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಮುಕ್ತಾಯಗೊಳಿಸಿತು.
‘ಸಂತೋಷ್ ರಾವ್ ಮತ್ತು ಚಂದಪ್ಪ ಗೌಡ ಅವರು ಪ್ರಕರಣದ ಮರು ತನಿಖೆಗೆ ಮನವಿ ಮಾಡಿದ್ದಾರೆ. ಈ ಹಿಂದೆ ಸೌಜನ್ಯಾಳ ತಂದೆಯೇ ಮರು ತನಿಖೆ ನಡೆಸುವಂತೆ ಕೋರಿದ್ದರು. ಈ ವಿಚಾರವನ್ನು ಹೈಕೋರ್ಟ್‌ನ ಬೇರೊಂದು ನ್ಯಾಯಪೀಠ ಈ ಹಿಂದೆಯೇ ನಿರ್ಧರಿಸಿದ್ದು, ಮರು ತನಿಖೆಗೆ ನಿರಾಕರಿಸಿತ್ತು. ಈಗ ಅದೇ ಪರಿಹಾರ ಕೋರಲಾಗದು’ ಎಂಬ ಸಿಬಿಐ ವಾದ ಹಾಗೂ ಇದಕ್ಕೆ ಪ್ರತಿವಾದ ಆಲಿಸಿದ ನ್ಯಾಯಪೀಠ, ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…