Featured

ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ -vishwanews24

ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ

ಮಂಗಳೂರು : ಸೌಜನ್ಯಾ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಆದ್ದರಿಂದ 90 ದಿನಗಳಲ್ಲೇ ಪ್ರಕರಣದ ತನಿಖೆ ಪೂರ್ಣಗೊಳಿಸಬೇಕು ಎಂದು ನಾವು ಒತ್ತಾಯಿಸುವುದಿಲ್ಲ. ಈ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದ್ದಾರೆ.

ಮಂಗಳೂರಿನ ಎಸ್‌ಐಟಿ ಕಚೇರಿಗೆ ಗುರುವಾರ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದ ತಮ್ಮಲ್ಲಿದ್ದ ದಾಖಲೆಗಳನ್ನು ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ, “ನನ್ನಂಥ ಸಾವಿರ ಡಿ.ಕೆ.ಶಿವಕುಮಾರ್‌ಗಳು ನಿಮ್ಮ ರಕ್ಷಣೆಗೆ ಇದ್ದಾರೆ” ಎಂದು ಹೇಳಿದ್ದರು. ಯಾರಿಗೆ ಈ ಮಾತು ಹೇಳಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಆದ್ದರಿಂದ ನಾವು ಎಸ್‌ಐಟಿಯಲ್ಲಿ ನ್ಯಾಯ ಕೇಳುತ್ತಿಲ್ಲ; ರಾಜ್ಯದ ಮುಖ್ಯಮಂತ್ರಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಕೇಳುತ್ತಿದ್ದೇವೆ ಎಂದರು.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆಗೆ ಪೂರಕವಾದ ದಾಖಲೆಗಳನ್ನು ಸಲ್ಲಿಸಿದ್ದೇನೆ. ನನ್ನಲ್ಲಿರುವ ಹಲವಾರು ದಾಖಲೆಗಳನ್ನು ಟೈಪ್ ಮಾಡಿದ ರೂಪದಲ್ಲಿ, ಕೈಬರಹದಲ್ಲಿ ಹಾಗೂ ಸಿಡಿಯಲ್ಲಿಯೂ ನೀಡಿದ್ದೇನೆ. ಎಸ್‌ಐಟಿ ಅಧಿಕಾರಿಗಳು ಇನ್ನೂ ಕೆಲವು ಮಾಹಿತಿಗಳನ್ನು ನೀಡುವಂತೆ ಕೇಳಿದ್ದಾರೆ. ಅವುಗಳನ್ನೂ ಒದಗಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ಸೌಜನ್ಯಾ ಪ್ರಕರಣ ನಡೆದು 14 ವರ್ಷಗಳಾಗಿವೆ. ಇಷ್ಟು ಹಿಂದಿನ ಪ್ರಕರಣದ ತನಿಖೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಎಸ್‌ಐಟಿ ಅಧಿಕಾರಿಗಳು ಅದಕ್ಕೆ ಪೂರಕವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ ಪ್ರಕರಣದ ಆಳಕ್ಕೆ ಇಳಿದು ತನಿಖೆ ನಡೆಸಬೇಕಾದರೆ ಇನ್ನೂ ಹೆಚ್ಚಿನ ಸಮಯ ಬೇಕಾಗುವ ಸಾಧ್ಯತೆಯಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ಇನ್ನೂ ಪತ್ತೆಹಚ್ಚಬೇಕಾಗಿದೆ. ಅದು ಅಷ್ಟು ಸುಲಭದ ಕೆಲಸವಲ್ಲ. ಆದರೂ ಇಂದಿನ ತಂತ್ರಜ್ಞಾನ ಯುಗದಲ್ಲಿ ಸಾಕ್ಷಿಗಳನ್ನು ಪತ್ತೆಹಚ್ಚಲು ಹಲವು ಮಾರ್ಗಗಳಿವೆ. ಅವುಗಳನ್ನು ಹುಡುಕಿಯೇ ಹುಡುಕುತ್ತಾರೆ. ಪ್ರಕರಣದ ಹಿಂದಿನ ಆರೋಪಿಗಳನ್ನು ಪತ್ತೆಹಚ್ಚುತ್ತಾರೆ ಎಂಬ ವಿಶ್ವಾಸ ನಮಗಿದೆ. ಹೊಸ ಸಾಕ್ಷಿಗಳು ಮುಂದೆ ಬರುತ್ತಿದ್ದಾರೆ. ಗೌಪ್ಯ ಸಾಕ್ಷಿಗಳೂ ಇದ್ದಾರೆ. ನಾವೂ ಕೆಲವು ಸಾಕ್ಷ್ಯಗಳನ್ನು ಒದಗಿಸಲಿದ್ದೇವೆ. ಎಸ್‌ಐಟಿ ಅಧಿಕಾರಿಗಳು ಮತ್ತೆ ನಮ್ಮನ್ನು ಕರೆದಿದ್ದಾರೆ ಎಂದು ಹೇಳಿದರು.

ಸೌಜನ್ಯಾ ಹೋರಾಟಕ್ಕೆ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಧ್ವನಿಗೂಡಿಸಿರುವ ಕುರಿತು ಪ್ರತಿಕ್ರಿಯಿಸಿದ ತಿಮರೋಡಿ, ಕಲ್ಲಡ್ಕ ಪ್ರಭಾಕರ ಭಟ್ ಅವರು ಸನಾತನ ಹಿಂದೂ ಧರ್ಮದ ಪರವಾಗಿ ಹೋರಾಡಿಕೊಂಡು ಬಂದವರು. ನಾವೂ ರಾಜಕೀಯಕ್ಕಾಗಿ ಅಥವಾ ಸ್ವಾರ್ಥಕ್ಕಾಗಿ ಈ ಹೋರಾಟ ಮಾಡುತ್ತಿಲ್ಲ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಪಾವಿತ್ರ್ಯತೆ ಎತ್ತಿ ನಿಲ್ಲಬೇಕು ಎಂಬುದೇ ನಮ್ಮ ಉದ್ದೇಶ. ಈ ಹೋರಾಟಕ್ಕೆ ಎಲ್ಲರನ್ನೂ ಅಣ್ಣಪ್ಪ ಮತ್ತು ಮಂಜುನಾಥ ಸ್ವಾಮಿಯೇ ಒಗ್ಗೂಡಿಸುತ್ತಿದ್ದಾರೆ ಎಂದರು.

Vishwa News 24

Recent Posts

ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ -vishwanews24

ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ ಬೆಂಗಳೂರು:…

2 hours ago

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ : ಡಿ.1ರಿಂದ ದೇಶಾದ್ಯಂತ ಬಿಜೆಪಿಯ ‘ಸೇವಾ ದೂತ’ ಅಭಿಯಾನ -vishwanews24

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಡಿ.1ರಿಂದ ದೇಶಾದ್ಯಂತ ಬಿಜೆಪಿಯ 'ಸೇವಾ ದೂತ’ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ…

2 hours ago

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ -vishwanews24

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಉಡುಪಿ : ಕಾರ್ಕಳ ಶ್ರೀವೆಂಕಟರಮಣ…

2 hours ago

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ -vishwanews24

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ…

4 hours ago

ಉಡುಪಿ : ನ. 27ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ಡೈರಿ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ -vishwanews24

ಉಡುಪಿ : ನ. 27ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ಡೈರಿ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ ಉಡುಪಿ:…

4 hours ago

ನಂದಿನಿ ಮೊಸರಿನ ದರ 2 ರೂ.ಇಳಿಕೆ -vishwanews24

ನಂದಿನಿ ಮೊಸರಿನ ದರ 2 ರೂ.ಇಳಿಕೆ ಬೆಂಗಳೂರು : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ಮೊಸರಿನ…

4 hours ago