Featured

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ

ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮರು ತನಿಖೆಗೆ ನಿಯೋಜನೆಗೊಂಡ ನೂತನ ವಿಶೇಷ ತನಿಖಾ ತಂಡ (SIT) ಗುರುವಾರ ಮಂಗಳೂರಿಗೆ ಆಗಮಿಸಿದೆ.

ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿರುವ ಹಳೆ ಡಿಸಿ ಅಫೀಸ್ ನ 2ನೇ ಮಹಡಿಯಲ್ಲಿ ತೆರೆಯಲಾಗಿರುವ ಎಸ್ಐಟಿ ಕಚೇರಿಗೆ ಆಗಮಿಸಿದ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆಗೈಯಲಾಗಿದೆ. ಈ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಸೂಚಿಸಿದೆ. ಎಸ್ಐಟಿ ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಹಾಗೂ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಸೇರಿದಂತೆ 16 ಅಧಿಕಾರಿಗಳು ಎಸ್ಐಟಿಯಲ್ಲಿದ್ದಾರೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

39 minutes ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

44 minutes ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

4 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

4 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

4 hours ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

5 hours ago