ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮರು ತನಿಖೆಗೆ ಆದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮೃತಳ ಸಂಬಂಧಿ ಚಂದಪ್ಪಗೌಡ ಸಲ್ಲಿಸಿದ್ದ ತಕರಾರು ಅರ್ಜಿ ಕುರಿತು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.
ಸಂತೋಷ್‌ರಾವ್ ಸಹ ಪ್ರಕರಣದಲ್ಲಿ ಪ್ರತಿವಾದಿ
ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿದೆ. ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ರಾವ್ ಅವರನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…