Featured

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ – vishwanews24

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ನಿರ್ದೇಶನದ ಮೇರೆಗೆ ಪ್ರಕರಣದ ಮರುತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಐಜಿಪಿ ಎನ್. ಶಶಿಕುಮಾರ್  ಅವರ ನೇತೃತ್ವದಲ್ಲಿ ಈ ವಿಶೇಷ ತನಿಖಾ ದಳ ಕಾರ್ಯನಿರ್ವಹಿಸಲಿದ್ದು, ತಂಡದಲ್ಲಿ ಅನುಭವಿ ಉನ್ನತ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್‌ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್, ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರಿದ್ದಾರೆ.

2012ರಲ್ಲಿ ನಡೆದ ಈ ಭೀಕರ ಕೃತ್ಯದ ತನಿಖೆಯನ್ನು ಈ ಹಿಂದೆ ಸಿಬಿಐ ನಡೆಸಿತ್ತಾದರೂ, ಏಕೈಕ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ನೈಜ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಹಾಗೂ ಸಮಗ್ರ ತನಿಖೆ ನಡೆಯಬೇಕು ಎಂದು ಸೌಜನ್ಯ ಅವರ ತಾಯಿ ಕುಸುಮಾವತಿ ಹಾಗೂ ಹೋರಾಟಗಾರರು ನಿರಂತರವಾಗಿ ನಡೆಸಿದ ಕಾನೂನು ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಮರುತನಿಖೆಗೆ ನಿರ್ದೇಶನ ನೀಡಿತ್ತು.

ನ್ಯಾಯಾಲಯದ ಆದೇಶ ಪಾಲಿಸಿರುವ ರಾಜ್ಯ ಸರ್ಕಾರ, ಪ್ರಕರಣದ ನಿಷ್ಪಕ್ಷಪಾತ ಮತ್ತು ಆಳವಾದ ತನಿಖೆಗಾಗಿ ಐಪಿಎಸ್ ಅಧಿಕಾರಿಗಳ ಈ ಪ್ರಬಲ ತಂಡವನ್ನು ರಚಿಸಿದೆ.

Vishwa News 24

Recent Posts

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

14 minutes ago

ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…

29 minutes ago

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ – vishwanews24

ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : "ಈ…

51 minutes ago

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  ಬೆಂಗಳೂರು: "ಬರಗಾಲದ ಪರಿಸ್ಥಿತಿಯಲ್ಲಿ…

1 hour ago

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ ಉಡುಪಿ: ಉಡುಪಿ ಸಮೀಪದ…

1 hour ago

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…

19 hours ago