ಬೆಂಗಳೂರು : 11 ವರ್ಷದ ಹಿಂದೆ ನಡೆದ ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇದೀಗ ಮತ್ತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.
ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ ನಾಲ್ಕು ತಿಂಗಳ ಬಳಿಕ ಇದೀಗ ಸಿಬಿಐ ಸೌಜನ್ಯಾಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿ ಸಂತೋಷ್ ರಾವ್ ಎಂದು ಸಾಬೀತು ಮಾಡಲು ಮುಂದಾಗಿದೆ.
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಪ್ರತಿಭಟನೆ ಬಳಿಕ ರಾಜ್ಯ ಸರ್ಕಾರ ಸಿಬಿಐಗೆ ತನಿಖೆ ಜವಾಬ್ದಾರಿ ಒಪ್ಪಿಸಿತ್ತು. ಅದರಂತೆ ಸಂಸ್ಥೆಯು ತನಿಖೆ ನಡೆಸಿತ್ತು. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಕೂಡಾ ನಡೆದಿತ್ತು.ಸಂತೋಷ್ ರಾವ್ ವಿರುದ್ಧ ಸಾಕ್ಷ್ಯ ಗಳಿಲ್ಲದ ಕಾರಣ ಕೋರ್ಟ್ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ನೀಡಿ ಬಿಡುಗಡೆ ಮಾಡಿತ್ತು.
2023ರ ಜುಲೈ 16ರಂದು ನೀಡಿದ ತೀರ್ಪಿನ ವಿರುದ್ಧ ಈಗ ಮೇಲ್ಮನವಿ ಸಲ್ಲಿಸಲಾಗಿದೆ. ಜುಲೈ 16ರಂದು ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಆದರೆ, ತೀರ್ಪು ಬಂದ ನಾಲ್ಕು ತಿಂಗಳ ಬಳಿಕ ಮನವಿ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…