ದಕ್ಷಿಣಕನ್ನಡ : ಬೆಳ್ತಂಗಡಿ ಕೊಕ್ಕಡ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ.
ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಹೊಸ ಬ್ಯಾನರ್ ವೊಂದು ತಲೆಎತ್ತಿದ್ದು, ಹಿಂದೂಯೇತರರ ವಾಹನಗಳ ಬ್ಯಾನ್ ಎಂದು ಸಂದೇಶ ರವಾನಿಸಲಾಗಿದೆ.
ಬ್ಯಾನರ್ ನಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕೊಕ್ಕಡ ಪ್ರಕಟಣೆ ಎಂದು ಬರೆಯಲಾಗಿದ್ದು, ‘ಹಿಂದೂ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ, ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಬರೆಯಲಾಗಿದೆ. ಈ ಬ್ಯಾನರ್‌ನಿಂದ ಮತ್ತೊಂದು ಹೊಸ ರೀತಿ ಧರ್ಮದಂಗಲ್ ಗೆ ಕಾರಣವಾಗುತ್ತ ಅನ್ನೋದನ್ನು ಕಾದು ನೋಡಬೇಕಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…