ಮಂಗಳೂರು: ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್‌ಗಳಿಗೆ ಆಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ಆಗ್ರಹಿಸಿ ನ.11ರ ಬೆಳಿಗ್ಗೆ 9 ಗಂಟೆಯಿಂದ ನ್ಯಾಯ ಸಿಗುವ ತನಕ ಧರಣಿ ನಡೆಯಲಿದೆ ಎಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಎಲ್ಲಾ ಪ್ರಕರಣಗಳನ್ನು ಸಮಗ್ರವಾದ ತನಿಖೆ ನಡೆಸಿ ದುರುದ್ದೇಶದಿಂದ ಅಕ್ರಮವಾಗಿ ರಚಿಸಿಕೊಂಡ ಶ್ರೀ ಮಹಾಗಣ ಪತಿ ಸೇವಾ ಟ್ರಸ್ಟ್ ಸೌತಡ್ಕ (ರಿ) ಅನ್ನು ರದ್ದು ಪಡಿಸಿ ಅದರ ಎಲ್ಲಾ ಆಸ್ತಿಯನ್ನು ಅದರ ನಿಜವಾದ ಮಾಲೀಕರಾದ ಸೌತ್ತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಹಸ್ತಾಂತರಿಸಬೇಕು. ಟ್ರಸ್ಟ್ ಆದ ಬಳಿಕ ದಿಂದ ಇಂದಿನವರೆಗೆ ಆದ ಎಲ್ಲಾ ಆದಾಯಗಳ ಖರ್ಚು ವೆಚ್ಚಗಳ ತನಿಖೆ ನಡೆಸಿ ಎಲ್ಲಾ ಆದಾಯಗಳನ್ನು ದೇವಳದ ಖಜಾನೆಗೆ ತುಂಬಿಸುವಂತೆ ಆದೇಶಿಸಬೇಕು. ಕೊಕ್ಕಡ ಗ್ರಾಮದ ಸ.ನಂ. 215/2. 215/4, 215/5 ರಲ್ಲಿಯ ಒಟ್ಟು 3.46 ಎಕ್ರೆ ಸ್ಥಿರಾಸ್ತಿಯನ್ನು ದೇವಸ್ಥಾನದ ಅಭಿವೃದ್ಧಿಯ ದೃಷ್ಟಿಯಿಂದ ಭಕ್ತರ ಸಹಾಯದೊಂದಿಗೆ ಮೇಲೆ ಹೇಳಿದ ವಾಸುದೇವ ಶಬರಾಯ, ರಾಘವ 5 ಕೆ ಮತ್ತು ವಿಶ್ವ ನ ನಾಥ ಕೆ ಅವರು ಹೆಸರಿನಲ್ಲಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ದೇವಸ್ಥಾನದ ಹೆಸರಿಗೆ ಬರೆಯಿಸಿಕೊಳ್ಳುವರೇ ಸೂಕ್ತ ಆದೇಶ ಮಾಡ ಬೇಕಾಗಿ ಸರಕಾರವನ್ನು ಆಗ್ರಹಿಸಿ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಅನಿರ್ಧಿಷ್ಟ ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದು ಶಬರಾಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯಪ್ರಧಾನ ಕಾರ್ಯದರ್ಶಿ ಶ್ಯಾಮರಾಜ್, ಖಜಾಂಜಿ ವಿಶ್ವನಾಥ ಕೆ, ಉಪಾಧ್ಯಕ್ಷ ಪ್ರಶಾಂತ ರೈ ಗೋಳಿತೊಟ್ಟುಸದಸ್ಯ ಶ್ರೀ ವತ್ಸ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…