ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ : ವಿಟ್ಲದ ಯುವಕ ಸಾವು – Vishwanews24
ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ :ವಿಟ್ಲದ ಯುವಕ ಸಾವು
ವಿಟ್ಲ : ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮುಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಎಂದು ತಿಳಿದು ಬಂದಿದೆ.
ಹಬೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೈಂದೂರು: ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಆಸ್ತಿ ವಿವರ – Vishwanews24
