Featured

ಸೌದಿ: ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತದಿಂದ ಮೃತ್ಯು – vishwanews24

ಸೌದಿ: ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ: ಇಂದು ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.

ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು.

ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಪಕ್ಕದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಇಹಲೋಕ ತ್ಯಜಿಸಿದರು. ಅತ್ಯುತ್ತಮ ಹಿನ್ನಲೆ ಗಾಯಕರೂ ಆಗಿದ್ದ ಅವರು ಆರಂಭದಲ್ಲಿ ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿ ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಮೃತರು ತಂದೆ ಅಬ್ದುಲ್ ರಝಾಕ್, ತಾಯಿ ಶಂಶೀರ ಬಾನು, ಪತ್ನಿ ರೇಷ್ಮಾ ಹಾಗೂ ಒಂದು ಗಂಡು,ಮೂರು ಹೆಣ್ಣು ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

22 hours ago