Featured

ಸೌದಿ : ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ ; ಮೂಲ್ಕಿ ಮೂಲದ ವ್ಯಕ್ತಿ ಸಾವು – vishwanews24

ಸೌದಿ : ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ ; ಮೂಲ್ಕಿ ಮೂಲದ ವ್ಯಕ್ತಿ ಸಾವು

ಮಂಗಳೂರು: ಮೂಲ್ಕಿ ಮೂಲದ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯದ ರಿಯಾದ್‌ನಲ್ಲಿ ನಡೆದಿದೆ.

ಸೌದಿ ಕಾಲಮಾನ ಸಂಜೆ 4 ಗಂಟೆಗೆ ಮನ್ಸೂರ್ ಅವರು ಕೊನೆಯುಸಿರೆಳೆದಿದ್ದಾರೆ. ಅವರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮನ್ಸೂರ್ ಮೂಲ್ಕಿ ಅವರು ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್ ಯೂತ್ ಕ್ಲಬ್‌ನ ಸದಸ್ಯರಾಗಿದ್ದರು. ಅವರು ಸಾವನ್ನಪ್ಪುವ ಕೇವಲ 15 ನಿಮಿಷದ ಮುನ್ನ ಸುಮಾರು ಅರ್ಧ ಗಂಟೆಗಳ ಕಾಲ ಮೊಬೈಲ್‌ನಲ್ಲಿ ತಾಯಿಯೊಂದಿಗೆ ಮಾತನಾಡಿದ್ದರು ಎನ್ನಲಾಗಿದೆ.

ಇನ್ನು ಮನ್ಸೂರ್ ಮೂಲ್ಕಿ ಅವರ ಅಂತ್ಯಕ್ರಿಯೆ ಸೌದಿಯಲ್ಲೇ ನಡೆಯಲಿದೆ. ಅವರ ತಾಯಿ, ಪತ್ನಿ, ಮೂವರು ಮಕ್ಕಳು ಹಾಗೂ ಬಾವ ಸೇರಿ 6 ಮಂದಿ ಪ್ರಯಾಣಕ್ಕೆ ಮನ್ಸೂರ್ ಅವರು ಉದ್ಯೋಗದಲ್ಲಿ ಇರುವ ಸಂಸ್ಥೆಯ ಹೆಜಮಾಡಿ ಮೂಲದ ಮಾಲಕ, ಉದ್ಯಮಿ ಸಿರಾಜ್ ಅವರು ಕುಟುಂಬದವರ ಸೌದಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದಾರೆ. ಸಿರಾಜ್ ಅವರು ಇತ್ತೀಚೆಗಷ್ಟೇ ಊರಿಗೆ ಬಂದಿದ್ದು, ವಾಪಸ್ ಸೌದಿಗೆ ತೆರಳಿದ್ದರು. 15 ವರ್ಷಗಳಿಂದ ಅವರು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಕೆಲಸ ಮಾಡುತ್ತಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

57 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago