ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೂಸ್ಟನ್ ಮತ್ತು ನ್ಯೂಯಾರ್ಕ್‌ಗೆ ಭೇಟಿ ನೀಡಲಿದ್ದು, ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ ಮತ್ತು ಮಹಾತ್ಮ ಗಾಂಧಿಯವರ 150ನೇ ಜಯಂತಿಯ ವಾರ್ಷಿಕೋತ್ಸವ ಪ್ರಯುಕ್ತ ವಿಶ್ವಸಂಸ್ಥೆ ಹೊರತರತ್ತಿರುವ ವಿಶೇಷ ಅಂಚೆಚೀಟಿ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕುರಿತು ಸುದ್ದಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್, ಸೆಪ್ಟೆಂಬರ್ 24ರಂದು ಔಪಚಾರಿಕವಾಗಿ ಉದ್ಘಾಟಿಸಲಿರುವ ಗಾಂಧಿ ಸೌರ ಘಟಕದ ವೆಚ್ಚ ಸುಮಾರು 1 ದಶಲಕ್ಷ ಡಾಲರ್ ಎಂದು ಮಾಹಿತಿ ನೀಡಿದರು.
ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಪ್ರಧಾನ ಕಚೇರಿಗೆ ವಿದ್ಯುತ್ ಪೂರೈಸಲು ಈ ಘಟಕವು 50 ಕಿಲೋವ್ಯಾಟ್ “ಹಸಿರು” ವಿದ್ಯುತ್ ಉತ್ಪಾದಿಸುತ್ತದೆ. ನಗರದ ಸ್ಕೈಲೈನ್ ಕಟ್ಟಡದ ಮೇಲ್ಛಾವಣಿಯಲ್ಲಿ ಸೌರ ಘಟಕವನ್ನು ಸ್ಥಾಪಿಸಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…