ಕೊಪ್ಪ: ಇಲ್ಲಿನ ಬಾಳಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿಸ್ಕಾರ್ಫ್- ಕೇಸರಿ ಶಾಲು ವಿವಾದ ಮತ್ತೆ ಸುದ್ದಿ ಮಾಡಿದೆ. ಮುಸ್ಲಿಂ ವಿದ್ಯಾರ್ಥಿನಿಯರು ತರಗತಿ ಒಳಗೆ ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ಕೇಸರಿ ಶಾಲು ಧರಿಸಿ ಸೋಮವಾರ ತರಗತಿಗೆ ಹಾಜರಾಗಿದ್ದಾರೆ.
ಈ ಕಾಲೇಜಿನಲ್ಲಿ ಮೂರು ವರ್ಷಗಳ ಹಿಂದೆಯೂ ಇದೇರೀತಿ ಕೆಲವು ವಿದ್ಯಾರ್ಥಿಗಳು ವಿನಾ ಕಾರಣ ವಿವಾದ ಸೃಷ್ಟಿಸಿದ್ದರು. ಬಳಿಕ ವಿದ್ಯಾರ್ಥಿಗಳ ಪೋಷಕರು, ಪ್ರಾಂಶುಪಾಲರ ವಿವಾದವನ್ನು ತಿಳಿಗೊಳಿಸಿದ್ದರು.
ಇದೀಗ ಮತ್ತೆ ಕಾಲೇಜಿನಲ್ಲಿ ಸ್ಕಾರ್ಫ್ ಹೆಸರಿನಲ್ಲಿ ವಿವಾದ ಸೃಷ್ಟಿಸಲು ಕೆಲವು ವಿದ್ಯಾರ್ಥಿಗಳು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮಾಹಿತಿ ತಿಳಿದ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಶಾಲೆಗೆ ಭೇಟಿ ನೀಡಿ, ರಾಜ್ಯ ಸರಕಾರ ಕಾಲೇಜು ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಯಾವ ಆದೇಶ ಹೊರಡಿಸಿದೆಯೋ ಅದರಂತೆ ವಿದ್ಯಾರ್ಥಿಗಳು ನಿಯಮಗಳನ್ನು ಪಾಲಿಸಬೇಕು. ಒಂದು ಧರ್ಮದವರನ್ನು ಗುರಿಯಾಗಿಸಿಕೊಂಡು ಕಾಲೇಜಿನ ಶೈಕ್ಷಣಿಕ ವಾತಾವರಣದಲ್ಲಿ ಗೊಂದಲ ಮೂಡಿಸಬಾರದು. ಕಾಲೇಜು ಮುಖ್ಯಸ್ಥರು ಸರಕಾರದ ಆದೇಶದಂತೆ ಕಾಲೇಜಿನಲ್ಲಿ ನಿಯಮಗಳನ್ನು ಪಾಲಿಸಬೇಕು. ಗೊಂದಲ ಸೃಷ್ಟಿಸುವ ವಿದ್ಯಾರ್ಥಿಗಳ ಪೋಷಕರನ್ನು ಕರೆಸಿ ಸಭೆ ನಡೆಸುವಂತೆ ಸೂಚಿಸಿದರು.
ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಂಶುಪಾಲ ಅನಂತ್ ಅವರು, ಸರಕಾರಿ ನಿಯಮದಂತೆಯೇ ಎಲ್ಲ ಕಾಲೇಜು ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಕಾಲೇಜಿಗೆ ಬರಬೇಕು. ಸರಕಾರದ ಆದೇಶವನ್ನು ತಪ್ಪದೇ ಪಾಲಿಸಬೇಕು. ಸರಕಾರದ ಆದೇಶವನ್ನು ನಾವು ಬದಲಾಯಿಸಲು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳು ನಿಯಮಗಳಂತೆಯೇ ನಡೆದುಕೊಳ್ಳಬೇಕೆಂದು ಸೂಚನೆ ನೀಡಿದರೆಂದು ತಿಳಿದು ಬಂದಿದ್ದು, ಆ ಬಳಿಕ ಸ್ಕಾರ್ಫ್-ಕೇಸರಿ ಶಾಲು ವಿವಾದ ತಹಬದಿಗೆ ಬಂದಿದೆ ಎಂದು ತಿಳಿದು ಬಂದಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…